
ಪ್ರಜಾವಾಣಿ ವಾರ್ತೆಚಿಕ್ಕಮಗಳೂರು: ಮಕ್ಕಳ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಎಲ್ಲಾ ಶಾಲಾ–ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ಶುಕ್ರವಾರ ನಡೆಯಿತು.
ಮಕ್ಕಳ ಕಲಿಕಾ ಪ್ರಗತಿ, ಹಾಜರಾತಿ ಕುರಿತು ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿದರು. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಕರು ಮಾಹಿತಿ ಹಂಚಿಕೊಂಡರು.
ಕೆಲವೆಡೆ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸುವ ಮೂಲಕ ಮಕ್ಕಳ ಪ್ರತಿಭೆಗಳನ್ನು ಪೋಷಕರ ಮುಂದೆ ಅನಾವರಣಗೊಳಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.