
ಉಡುಪಿ: ‘ಭಗವದ್ಗೀತೆಯ ಪ್ರಚಾರದಿಂದ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ. ಶಸ್ತ್ರಾಸ್ತ್ರಗಳಿಂದ ಶಾಂತಿಯನ್ನು ಸ್ಥಾಪನೆ ಮಾಡಲು ಸಾಧ್ಯವಿಲ್ಲ. ಶಾಸ್ತ್ರಾರ್ಥಗಳಿಂದ ಶಾಂತಿ ಸ್ಥಾಪನೆ ಮಾಡಬಹುದು’ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಗೀತಾ ಮಂದಿರದಲ್ಲಿ ಶುಕ್ರವಾರ ನಡೆದ ನೂತನ ಶ್ರೀಪುತ್ತಿಗೆ ನೃಸಿಂಹ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಜಗತ್ತಿನಲ್ಲಿ ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಶಾಂತಿ ನೆಲೆಗೊಳ್ಳಬೇಕಾದರೆ ಅದಕ್ಕಾಗಿ ಭಗವದ್ಗೀತೆಯನ್ನು ಪ್ರಧಾನವಾಗಿಟ್ಟುಕೊಂಡು ವಿಶ್ವವನ್ನು ಕಟ್ಟಬೇಕು’ ಎಂದರು.
ಸಭಾಭವನ ಉದ್ಘಾಟಿಸಿದ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ‘ಇಡೀ ಜಗತ್ತಿಗೆ ಧಾರ್ಮಿಕವಾಗಿ ಮಾರ್ಗದರ್ಶನ ಮಾಡುವಂತಹ ದೇಶ ನಮ್ಮದು. ಪುತ್ತಿಗೆ ಶ್ರೀಗಳು ಜಗತ್ತಿನಾದ್ಯಂತ ಭಗವದ್ಗೀತೆಯ ಸಂದೇಶವನ್ನು ಪಸರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.
‘ಜಾತಿ, ಮತ, ಕುಲ, ಪ್ರಾಂತೀಯತೆಯ ಸಂಕೋಲೆ ಒಡೆದು ನಾವು ಎತ್ತರವಾಗಿ ನಿಲ್ಲಬೇಕು’ ಎಂದು ಒಡಿಶಾ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.