ಕೊಪ್ಪ: ಪಟ್ಟಣಕ್ಕೆ ಹೊಂದಿಕೊಂಡಿರುವ ಉದಯನಗರದಲ್ಲಿ ರಸ್ತೆ ಹದಗೆಟ್ಟಿದ್ದು, ಗುಂಡಿಗಳಿಂದ ತುಂಬಿರುವ ರಸ್ತೆಯಲ್ಲಿ ಓಡಾಡಲು ಜನರು ಪರಿಪಾಟಲು ಪಡುತ್ತಿದ್ದಾರೆ.
ಪಟ್ಟಣದ ಮುಖ್ಯ ರಸ್ತೆಗೆ ಆಗಾಗ್ಗ ದುರಸ್ತಿ ಭಾಗ್ಯ ಲಭಿಸುತ್ತದೆ. ಆದರೆ, ಈ ರಸ್ತೆ ದುರಸ್ತಿ ಕಾಣದೆ ವರ್ಷಗಳು ಕಳೆದಿವೆ. ಚುನಾವಣೆ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿ ಭರವಸೆ ನೀಡುವ ರಾಜಕಾರಣಿಗಳು ಬಳಿಕ ಇತ್ತ ತಲೆಯೂ ಹಾಕುವುದಿಲ್ಲ ಎಂಬುದು ಸ್ಥಳೀಯರ ದೂರು.
ಚರಂಡಿ ಅಕ್ಕ ಪಕ್ಕ ಪೊದೆ ಬೆಳೆದಿದೆ. ಮಳೆಗಾಲ ಆರಂಭಗೊಂಡಿದ್ದರೂ ಹೂಳು ತೆಗೆದು ಚರಂಡಿ ಸ್ವಚ್ಛಗೊಳಿಸಿಲ್ಲ. ಈ ರಸ್ತೆಯು ಒಂದು ಭಾಗವು ಪಟ್ಟಣ ಪಂಚಾಯಿತಿ ವ್ಯಾಪ್ತಿಗೂ ಇನ್ನೊಂದು ಭಾಗವು ಗ್ರಾಮಾಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ಒಳಪಡುತ್ತದೆ. ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಎರಡೂ ಕಡೆಯಿಂದ ನಿರ್ಲಕ್ಷ್ಯ ವಹಿಸಲಾಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಸ್ಥಳೀಯರೊಬ್ಬರು ಹೇಳಿದರು.
ರಸ್ತೆ ದುರಸ್ತಿ ಮಾಡಿಸಿಲ್ಲ. ಚರಂಡಿಯೂ ಸ್ವಚ್ಛವಾಗಿಲ್ಲ. ಸಮಸ್ಯೆ ಕಣ್ಣಿಗೆ ಕಾಣುವಂತಿದ್ದರೂ ಪಂಚಾಯಿತಿಯವರು ಇತ್ತ ಗಮನ ಹರಿಸುತ್ತಿಲ್ಲ'ಅರ್ಬಾಜ್ ಉದಯನಗರ ನಿವಾಸಿ ಕೊಪ್ಪ
ಅಭಿವೃದ್ಧಿ ವಿಚಾರದಲ್ಲಿ ಎರಡೂ ಕಡೆಯಿಂದ ನಿರ್ಲಕ್ಷ್ಯ ವಹಿಸಲಾಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಸ್ಥಳೀಯರೊಬ್ಬರು ಹೇಳಿದರು. ಚರಂಡಿ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ವತಿಯಿಂದ ಗಮನ ಹರಿಸಲಾಗಿದೆ. ರಸ್ತೆ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆಉಸ್ಮಾನ್ ಗ್ರಾಮಾಂತರ ಗ್ರಾಮ ಪಂಚಾಯಿತಿ ಸದಸ್ಯ ಕೊಪ್ಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.