ADVERTISEMENT

150 ಸೀಟು ದಾಖಲಾತಿಗೆ ಅನುಮತಿ

ಚಿಕ್ಕಮಗಳೂರು ಸರ್ಕಾರಿ ವೈದ್ಯಕೀಯ ಕಾಲೇಜು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 16:45 IST
Last Updated 13 ಸೆಪ್ಟೆಂಬರ್ 2022, 16:45 IST
ಕೆ.ಎನ್‌.ರಮೇಶ್‌
ಕೆ.ಎನ್‌.ರಮೇಶ್‌   

ಚಿಕ್ಕಮಗಳೂರು: ‘ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಈ ವರ್ಷ ಆರಂಭವಾಗಲಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು ಪ್ರವೇಶಾತಿಗೆ ಅನುಮತಿ ನೀಡಿದ್ದು, 150 ಸೀಟು ದಾಖಲಾತಿ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಚಿಕ್ಕಮಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ಸಿಐಎಂಎಸ್‌) ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೋಧಕರು, ಸಿಬ್ಬಂದಿ ನೇಮಕಾತಿ ಆಗಿದೆ. ಕೆಎಸ್ಒಯು ಪ್ರಾದೇಶಿಕ ಕಚೇರಿ ಕಟ್ಟಡ, ಪಿಡಬ್ಲ್ಯುಡಿ ಕಚೇರಿ ಕಟ್ಟಡ, ಜಿಲ್ಲಾಸ್ಪತ್ರೆ ಕಟ್ಟಡ, ಬಿಸಿಎಂ ಹಾಸ್ಟೆಲ್‌ಗಳಲ್ಲಿ ತಾತ್ಕಾಲಿಕ ವ್ಯವಸ್ಥೆ (ತರಗತಿ, ಪ್ರಯೋಗಾಲಯ ಇತ್ಯಾದಿ) ಕಲ್ಪಿಸಲಾಗುವುದು’ ಎಂದರು.

‘ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಮುಂದಿನ ವರ್ಷ ಪೂರ್ಣಗೊಳ್ಳಲಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.