
ಪ್ರಜಾವಾಣಿ ವಾರ್ತೆ
ಅಜ್ಜಂಪುರ: ತಾಲ್ಲೂಕಿನ ತಮ್ಮಟದಹಳ್ಳಿ ಬಳಿ, ಅಂತರಘಟ್ಟೆ ದುರ್ಗಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಸಂಜೆ ಸಾಗುತ್ತಿದ್ದ ಎತ್ತಿನ ಬಂಡಿಯ ನೊಗ ಬಡಿದು, ಪಟ್ಟಣ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವೀರೇಂದ್ರ ಅವರಿಗೆ ಪೆಟ್ಟಾಗಿದೆ.
ವೀರೇಂದ್ರ ಅವರ ತಲೆ ಭಾಗಕ್ಕೆ ಪೆಟ್ಟಾಗಿದ್ದು, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.