
ಪ್ರಜಾವಾಣಿ ವಾರ್ತೆ
ಚಿಕ್ಕಮಗಳೂರು: ಪೊಲೀಸ್ ಅಧಿಕಾರಿ ಕೆ. ರಾಮಚಂದ್ರರಾವ್ ಅಮಾನತು ಆದೇಶ ಹಿಂಪಡೆಯಬೇಕು ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಒತ್ತಾಯಿಸಿದರು.
ಆರೋಪ ಬಂದ ಕೂಡಲೇ ಅಮಾನತು ಮಾಡಲಾಗಿದೆ. ಯಾವುದೇ ತನಿಖೆ ಮಾಡದೆ ಹೊರಡಿಸಿರುವ ಆದೇಶ ಹಿಂಪಡೆಯಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಬುಧವಾರ ಆಗ್ರಹಿಸಿದರು.
ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೊ ಎ.ಐ ಸೃಷ್ಟಿ ಎಂದು ರಾಮಚಂದ್ರರಾವ್ ಹೇಳಿಕೆ ನೀಡಿದ್ದಾರೆ. ಈ ವಿಡಿಯೊವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜಯ್ಯ ಬಾಚಿಗನಹಳ್ಳಿ, ಸದಸ್ಯರಾದ ಚಂದ್ರಶೇಖರ್, ಅಂತೋಣಿಯಮ್ಮ, ಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.