ADVERTISEMENT

ಮಲಹಾನಿಕಾರೇಶ್ವರ ಸ್ವಾಮಿಗೆ ವಿಶೇಷ ಪೂಜೆ

ಶಾರದಾ ಸನ್ನಿಧಿಯಲ್ಲಿ ವಿಶೇಷ ಪೂಜೆ, ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 16:16 IST
Last Updated 11 ಮಾರ್ಚ್ 2021, 16:16 IST
 ಶೃಂಗೇರಿ ಶಾರದ ಮಠದ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ಸ್ವಾಮೀಜಿ ಶಿವರಾತ್ರಿ ಪ್ರಯುಕ್ತ ಬೆಟ್ಟದ ಮಲಹಾನಿಕರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
 ಶೃಂಗೇರಿ ಶಾರದ ಮಠದ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ಸ್ವಾಮೀಜಿ ಶಿವರಾತ್ರಿ ಪ್ರಯುಕ್ತ ಬೆಟ್ಟದ ಮಲಹಾನಿಕರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.   

ಶೃಂಗೇರಿ: ಶೃಂಗೇರಿಯ ಬೆಟ್ಟದ ಮಲಹಾನಿಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.

ಶಾರದಾ ಪೀಠದ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ಸ್ವಾಮೀಜಿ ಬೆಳಿಗ್ಗೆ ಮಠದ ಎಲ್ಲ ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದು, ಶಾರದಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕಾಲ್ನಡಿಗೆಯಲ್ಲಿ ಬೆಟ್ಟದ ಮಲಹಾನಿಕಾರೇಶ್ವರ ಸ್ವಾಮಿ ಸನ್ನಿಧಿಗೆ ತೆರಳಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಉಭಯ ಗುರುಗಳು ಸ್ತಂಭ ಗಣಪತಿ, ಭವಾನಿ ಅಮ್ಮನವರಿಗೆ ಪೂಜೆ ನೇರವೆರಿಸಿದರು. ಮಲಹಾನಿಕಾರೇಶ್ವರ ಸ್ವಾಮಿಗೆ ಶತರುದ್ರಾಭಿಷೇಕ, ಪಂಚಾಮೃತಭಿಷೇಕ, ಶ್ರೀಸೂಕ್ತ ಮತ್ತು ಪುರುಷಸೂಕ್ತ ಪಠಣದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾತ್ರಿ ಪ್ರಯುಕ್ತ ಶಾರದಾ ಮಠದ ಗುರು ನಿವಾಸದ ಸ್ವರ್ಣ ಮಂಟಪದಲ್ಲಿ ವಿರಾಜಮಾನರಾಗಿರುವ ಚಂದ್ರಮೌಳೇಶ್ವರ ಸ್ವಾಮಿಯ ಸ್ಫಟಿಕ ಲಿಂಗಕ್ಕೆ ರಾತ್ರಿಯಿಂದ ಬೆಳಿಗ್ಗೆವರೆಗೆ ವಿಶೇಷ ಪೂಜೆ ನಡೆಯಿತು. ಶಾರದಾ ಮಠದ ಋತ್ವಿಜರಿಂದ ರುದ್ರ ಪಠಣದೊಂದಿಗೆ ಮಲಹಾನಿಕರೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಬೆಳಿಗ್ಗೆವರೆಗೆ ಪೂಜೆ ನೆರವೇರಿತು. ವಿವಿಧೆಡೆಗಳ ಭಕ್ತರು ಕ್ಷೇತ್ರಕ್ಕೆ ಬಂದಿದ್ದರು.

ADVERTISEMENT

ಮಠದ ಪುರೋಹಿತರಾದ ಕೃಷ್ಣ ಭಟ್, ಶಿವಕುಮಾರ ಶರ್ಮ, ಸೀತಾರಾಮ ಶರ್ಮ, ನಾಗರಾಜ ಭಟ್, ಸದ್ವಿದ್ಯಾ ಸಂಜೀವಿನಿ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಿಂದ ರುದ್ರಪಠಣ ನಡೆಯಿತು. ಸಾವಿರಾರು ಭಕ್ತರು ಬೆಳಿಗ್ಗೆಯಿಂದಲೇ ಬೆಟ್ಟಕ್ಕೆ ತೆರಳಿ ದೇವರಿಗೆ ಹಣ್ಣು–ಕಾಯಿ, ಪುಷ್ಪ ಸಮರ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.