ADVERTISEMENT

ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ

₹ 20 ಲಕ್ಷ ವೆಚ್ಚದಲ್ಲಿ ನಿರ್ಮಾಣ: ಶಾಸಕ ಟಿ.ಡಿ.ರಾಜೇಗೌಡ

​ಪ್ರಜಾವಾಣಿ ವಾರ್ತೆ
Published 13 ಜೂನ್ 2022, 2:58 IST
Last Updated 13 ಜೂನ್ 2022, 2:58 IST
ಕಟ್ಟಿನಮನೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭಾನುವಾರ ಶಾಸಕ ಟಿ.ಡಿ.ರಾಜೇಗೌಡ ಶಂಕುಸ್ಥಾಪನೆ ನೆರವೇರಿಸಿದರು. ಕಾನೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ, ಶಂಕರನಾರಾಯಣ ಭಟ್ ಇದ್ದರು.
ಕಟ್ಟಿನಮನೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭಾನುವಾರ ಶಾಸಕ ಟಿ.ಡಿ.ರಾಜೇಗೌಡ ಶಂಕುಸ್ಥಾಪನೆ ನೆರವೇರಿಸಿದರು. ಕಾನೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ, ಶಂಕರನಾರಾಯಣ ಭಟ್ ಇದ್ದರು.   

ಕಟ್ಟಿನಮನೆ (ಎನ್.ಆರ್.ಪುರ): ಕಟ್ಟಿನಮನೆಯಲ್ಲಿ ₹ 20 ಲಕ್ಷ ವೆಚ್ಚದಲ್ಲಿ ನಿರ್ಮಿಸುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

‘ಕೋವಿಡ್ ಸಂಕಷ್ಟ ಕಾಲದ ಎರಡು ವರ್ಷದಲ್ಲಿ ಬಡವರ ಸಂಕಷ್ಟಕ್ಕೆ ನೆರವು ನೀಡಲು ವೈಯಕ್ತಿಕವಾಗಿ ₹ 1 ಕೋಟಿ ವೆಚ್ಚ ಮಾಡಿ ಕಷ್ಟಕ್ಕೆ ಸ್ಪಂದಿಸಲಾಗಿದೆ’ ಎಂದು ಶಂಕುಸ್ಥಾಪನೆ ಮಾಡಿದ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

‘ಕೊಪ್ಪ, ನರಸಿಂಹರಾಜಪುರ ಹಾಗೂ ಶೃಂಗೇರಿ ಸರ್ಕಾರಿ ಆಸ್ಪತ್ರೆಗಳಿಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆಮ್ಲಜನಕ ಉತ್ಪಾದನಾ ಘಟಕ, ಐಸಿಯು ಕೇಂದ್ರ ಆರಂಭವಾಗಿದೆ. ಕಾಯ್ದಿರಿಸಲಾಗಿದೆ. 110 ಜಂಬೊ ಸಿಲಿಂಡರ್ ಇದೆ’ ಎಂದರು.

ADVERTISEMENT

ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೋಹಿನಿ ಹಾಗೂ ಕಾನೂರು ವಿಎಸ್ಎಸ್‌ಎನ್ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೈ.ಲಲಿತಾ, ಕಟ್ಟಿನಮನೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತ್ನಾಕರ, ಸದಸ್ಯರಾದ ಶಿವಮೂರ್ತಿ, ಜಯಲಕ್ಷ್ಮೀ, ವಿಶಾಂತಿ ಡಿ.ಸೋಜ, ವಿಜಯಕುಮಾರ್, ನಾಗರತ್ನ, ನಯನ, ಮನೋಹರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಸಿ.ನಾಗೇಶ್, ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ನಟರಾಜ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.