ಕೊಪ್ಪ: ಇಲ್ಲಿನ ಪೌರ ಗಣೇಶೋತ್ಸವ ಸಮಿತಿ ವತಿಯಿಂದ 51ನೇ ವರ್ಷದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಶನಿವಾರ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಿದ ಬಳಿಕ ವಿಸರ್ಜನಾ ಪೂಜೆ ನೆರವೇರಿಸಲಾಯಿತು. ಸಂಜೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಕಲಾ ತಂಡಗಳೂ ಮೆರವಣಿಗೆಯಲ್ಲಿ ಸಾಗಿದವು.
ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದಂತೆ ಪ್ರಮುಖ ಕಡೆಗಳಲ್ಲಿ ಪಿಎಸ್ಐ ಬಸವರಾಜ್ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ್ದ ವರಸಿದ್ಧಿ ವಿನಾಯಕನ ಮೂರ್ತಿಯನ್ನು 11 ದಿನಗಳ ಪರ್ಯಂತ ಪೂಜಿಸಿ, ಗಣಪತಿ ಹೋಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿಸಲಾಗಿತ್ತು. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು. ಉತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.