ADVERTISEMENT

ಚಿಕ್ಕಮಗಳೂರು | ಸಂಸ್ಕರಣಾ ಘಟಕಕ್ಕೆ ಅನುದಾನ ಕೋರಿ ಪ್ರಸ್ತಾವನೆ: ಸಂಸದ

​ಪ್ರಜಾವಾಣಿ ವಾರ್ತೆ
Published 10 ಜನವರಿ 2025, 14:35 IST
Last Updated 10 ಜನವರಿ 2025, 14:35 IST
ಸಾಂಪ್ರದಾಯಿಕ ಕೈಗಾರಿಕೆಗಳ ಪುನುರಜ್ಜೀವನ ಯೋಜನೆ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾತಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಸಾಂಪ್ರದಾಯಿಕ ಕೈಗಾರಿಕೆಗಳ ಪುನುರಜ್ಜೀವನ ಯೋಜನೆ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾತಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು   

ಚಿಕ್ಕಮಗಳೂರು: ಕಾಳು ಮೆಣಸು, ಕಾಫಿ, ಅಡಿಕೆ ಸಂಸ್ಕರಣೆಗಾಗಿ ಚಿಕ್ಕಮಗಳೂರಿನಲ್ಲಿಯೇ ಸಂಸ್ಕರಣೆ ಘಟಕ ಸ್ಥಾಪಿಸಲು ಅನುದಾನ ಬಿಡುಗಡೆ ಮಾಡಲು ಕೇಂದ್ರ ಸರ್ಕಾಕರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕಾರ್ಯಕ್ರಮದ ಸಾಂಪ್ರದಾಯಿಕ ಕೈಗಾರಿಕೆಗಳ ಪುನುರಜ್ಜೀವನ ಯೋಜನೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಳು ಮೆಣಸು, ತೆಂಗು, ಕಾಫಿ, ಅಡಿಕೆ, ಖಾದಿ ಕೈಗಾರಿಕೆ, ಗ್ರಾಮ ಕೈಗಾರಿಕೆ, ಕಾಯರ್ ಉದ್ಯಮ, ಇಂತಹ ಸಂಪ್ರದಾಯಿಕ ಕೈಗಾರಿಕೆಗಳು ಈ ಯೋಜನೆಯ ವ್ಯಾಪ್ತಿಗೆ ಬರುತ್ತವೆ. ಸಾಂಪ್ರದಾಯಿಕ ಕೈಗಾರಿಕೆ ಮತ್ತು ಕುಶಲಕರ್ಮಿಗಳನ್ನು ಸಾಮೂಹಿಕವಾಗಿ ಸಂಘಟಿಸುವುದು ಈ ಯೋಜನೆಯ ಉದ್ದೇಶ ಎಂದರು.

ADVERTISEMENT

ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ, ಉಪನಿರ್ದೇಶಕ ವೆಂಕಟೇಶ್ ಚೌಹಾಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.