ADVERTISEMENT

ರಾಹುಲ್ ಗಾಂಧಿ ಬಂಧಿಸಿದ್ದಲ್ಲಿ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 4:55 IST
Last Updated 21 ಜೂನ್ 2022, 4:55 IST
ಶೃಂಗೇರಿ ಪಟ್ಟಣದ ಕುರುಬಕೇರಿ ವೃತ್ತದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು
ಶೃಂಗೇರಿ ಪಟ್ಟಣದ ಕುರುಬಕೇರಿ ವೃತ್ತದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು   

ಶೃಂಗೇರಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ (ಇಡಿ) ಬಳಸಿಕೊಂಡು ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ. ಒಂದು ವೇಳೆ ರಾಹುಲ್ ಗಾಂಧಿ ಅವರನ್ನು ಬಂಧಿಸಿದ್ದಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತೇವೆ' ಎಂದು ಗ್ರಾಮ ಪಂಚಾಯಿತಿ ಸದಸ್ಯ ಪುಟ್ಟಪ್ಪ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.

ಶೃಂಗೇರಿ ಪಟ್ಟಣದ ಕುರುಬಕೇರಿ ವೃತ್ತದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್‍ನ ನಟರಾಜ್ ಮಾತನಾಡಿ, ‘ಕೇಂದ್ರ ಸರ್ಕಾರ ತಮಗೆ ಬೇಕಾಗುವಷ್ಟು ಹಣ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರ ಮೇಲೆ ಭ್ರಷ್ಟಾಚಾರದ ಗೂಬೆ ಕೂರಿಸಿದ್ದಾರೆ' ಎಂದರು.

ಕಾಂಗ್ರೆಸ್ ಮುಖಂಡ ಕೊಡತಲು ರಮೇಶ್ ಭಟ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕುರಾದಮನೆ ವೆಂಕಟೇಶ್, ಕಿಸಾನ್ ಘಟಕದ ಅಧ್ಯಕ್ಷ ಗೋಪಾಲ್ ನಾಯ್ಕ್, ಕಾಂಗ್ರೆಸ್ ಮುಖಂಡ ಭಾಸ್ಕರ್ ನಾಯ್ಕ್, ಕೆ.ಸಿ ವೆಂಕಟೇಶ್, ದಿನೇಶ್ ನೆಮ್ಮಾರ್, ಕೆ.ಟಿ ಮಂಜುನಾಥ್, ನೂತನ್‍ಕುಮಾರ್ ಹೆಗ್ಡೆ, ಸಂಧ್ಯಾ ಮರಿಯಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.