ADVERTISEMENT

ಜನವಸತಿ ಪ್ರದೇಶ ಕೈಬಿಡಲು ಆಗ್ರಹ

ಕಸ್ತೂರಿ ರಂಗನ್ ವರದಿಗೆ ವಿರೋಧ: ಶಿರವಾಸೆಯಲ್ಲಿ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 6:33 IST
Last Updated 26 ಜುಲೈ 2022, 6:33 IST
ಚಿಕ್ಕಮಗಳೂರು ತಾಲ್ಲೂಕಿನ ಶಿರವಾಸೆಯಲ್ಲಿ ಸೋಮವಾರ ಸಿಪಿಐನವರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಚಿಕ್ಕಮಗಳೂರು ತಾಲ್ಲೂಕಿನ ಶಿರವಾಸೆಯಲ್ಲಿ ಸೋಮವಾರ ಸಿಪಿಐನವರು ಪ್ರತಿಭಟನಾ ಮೆರವಣಿಗೆ ನಡೆಸಿದರು.   

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿಯ ಪರಿಸರ ಸೂಕ್ಷ್ಮ ವಲಯದ ಪಟ್ಟಿಯಿಂದ ಜನವಸತಿ ಪ್ರದೇಶ,
ಕೃಷಿ, ಪ್ಲಾಂಟೇಷನ್, ನಿವೇಶನ ಹಂಚಿಕೆಗಾಗಿ ಮೀಸಲಿಟ್ಟಿರುವ ಜಾಗಗಳನ್ನು ಕೈಬಿಡಬೇಕು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ತಾಲ್ಲೂಕಿನ ಶಿರವಾಸೆಯಲ್ಲಿ ಪ್ರತಿಭಟನೆ ನಡೆಯಿತು.

ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಹುತೇಕ ರೈತ, ಕೃಷಿ, ಕೂಲಿ ಕಾರ್ಮಿಕರು, ಆದಿವಾಸಿಗಳು ಹಾಗೂ ಬೆಳೆಗಾರರಿಗೆ ತೊಂದರೆಯಾಗಲಿದೆ. ವರದಿಯಲ್ಲಿನ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಜನವಸತಿ ಪ್ರದೇಶಗಳನ್ನು ಸೇರಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಮಂಡಲದ ವಿಶೇಷ ಅಧಿವೇಶನಕ್ಕೆ ಆಗ್ರಹ: ಸಿಪಿಐ ರಾಜ್ಯಸಮಿತಿ ಸದಸ್ಯ ಬಿ.ಅಮ್ಜದ್ ಮಾತನಾಡಿ, ಕಸ್ತೂರಿ ರಂಗನ್ ವರದಿಯಲ್ಲಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ವಾಸ ಇರುವ ಜನ ವಸತಿಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಈ ವರದಿ ಜಾರಿಯಿಂದ ಜನವಸತಿ ಪ್ರದೇಶಗಳಲ್ಲಿ ಉಂಟಾಗಬಹುದಾದ ಸಾಧಕ–ಬಾಧಕಗಳ ಚರ್ಚಿಸಬೇಕು. ಭೌತಿಕ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ADVERTISEMENT

ವಿಧಾನಸಭೆ ವಿಶೇಷ ಅಧಿವೇಶನ ಕರೆಯಬೇಕು. ರಾಜ್ಯದ 10 ಜಿಲ್ಲೆಗಳ 1500ಕ್ಕೂ ಹೆಚ್ಚು ಗ್ರಾಮಗಳಿಗೆ ಉಂಟಾಗಿರುವ ಭೀತಿ ಮತ್ತು ಆತಂಕವನ್ನು ನಿವಾರಣೆಗೆ ನಿರ್ಣಯ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.

ಸಿಇಐ ಜಿಲ್ಲಾ ಸಮಿತಿ ಸದಸ್ಯ ಜಾರ್ಜ್ ಆಸ್ಟಿನ್, ಜಿ.ಎಸ್. ತಾರಾನಾಥ್, ಕೆ.ರಾಜು, ನಿತಿನ್, ದೇಜು, ರೇವಣ್ಣ,ಎ.ಜಯಕುಮಾರ್, ಎಸ್.ಕೆ. ದಾನು, ಅಪ್ಪು, ಕೃಷ್ಣಪ್ಪ, ಬಿ.ಡಿ. ಕೃಷ್ಣ, ಶಂಕರ, ಗಂಗಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.