ADVERTISEMENT

ಮೈಕ್ರೊ ಫೈನಾನ್ಸ್ ಕಿರುಕುಳ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 14:31 IST
Last Updated 3 ಮಾರ್ಚ್ 2025, 14:31 IST
ಚಿಂತಾಮಣಿಯಲ್ಲಿ ಮೈಕ್ರೊ  ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್‌ಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರು
ಚಿಂತಾಮಣಿಯಲ್ಲಿ ಮೈಕ್ರೊ  ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್‌ಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರು    

ಚಿಂತಾಮಣಿ: ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್‌ಗಳ ಕಿರುಕುಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ನೇತೃತ್ವದಲ್ಲಿ ನೂರಾರು ರೈತರು ನಗರದ ಪ್ರವಾಸಿ ಮಂದಿರ ಬಳಿ ಜಮಾವಣೆಗೊಂಡು ಘೋಷಣೆ ಕೂಗಿದರು.

ರಾಜ್ಯ ಸಂಘದ ಕಾರ್ಯಾಧ್ಯಕ್ಷ ಜೆ.ವಿ.ರಘುನಾಥರೆಡ್ಡಿ ಮಾತನಾಡಿ, ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್‌ಗಳು ಸಾರ್ವಜನಿಕರಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿವೆ. ಕ್ರಮಕೈಗೊಳ್ಳುವುದಾಗಿ ಸರ್ಕಾರದ ಹೇಳಿಕೆ ಅನುಷ್ಠಾನಗೊಂಡಿಲ್ಲ ಎಂದರು.

ADVERTISEMENT

ಕೇಂದ್ರ ಸರ್ಕಾರ ರೈತರಿಗೆ ನೀಡುವ ₹6ಸಾವಿರ ಕಿಸಾನ್ ಸಮ್ಮಾನ್ ಹಣ, ರಾಜ್ಯ ಸರ್ಕಾರ ಮಹಿಳೆಯರಿಗೆ ಮಾಸಿಕವಾಗಿ ₹2ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆ, ನರೇಗಾ ಹಣ, ವೃದ್ಧಾಪ್ಯ ವೇತನ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಪ್ರಶ್ನೆ ಮಾಡಿದರೆ ಹೀನಾಯವಾಗಿ ಮಾತನಾಡುತ್ತಾರೆ ಎಂದು ಪ್ರತಿಭಟನಾಕಾರರು ದೂರಿದರು.

ರೈತರಿಗೆ ಕಿರುಕುಳ ನೀಡುತ್ತಿರುವ ಮೈಕ್ರೊ ಪೈನಾನ್ಸ್ ಮತ್ತು ಖಾಸಗಿ ಬ್ಯಾಂಕ್‌ಗಳ ವ್ಯವಸ್ಥಾಪಕರ ಸಭೆ ಕರೆದು ಎಚ್ಚರಿಸಬೇಕು ಎಂದು ಪ್ರತಿಭಟನಕಾರರು ಎಚ್ಚರಿಸಿದರು. 

ರೈತ ಸಂಘಟನೆಯ ಪದಾಧಿಕಾರಿಗಳಾದ ವೆಂಕಟರಾಮಯ್ಯ, ನಾರಾಯಣಸ್ವಾಮಿ, ಬಿ.ಎಂ.ರವೀಂದ್ರಗೌಡ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.