ADVERTISEMENT

ಬಸ್ ಪಾಸ್ ಅವಧಿ ವಿಸ್ತರಣೆಗೆಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 1:59 IST
Last Updated 3 ಜುಲೈ 2022, 1:59 IST
ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲು ಕೋರಿ ಎನ್ಎಸ್‌ಯುಐ ವಿದ್ಯಾರ್ಥಿ ಘಟಕದ ಸದಸ್ಯರು ಕಡೂರಿನಲ್ಲಿ ಉಪ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲು ಕೋರಿ ಎನ್ಎಸ್‌ಯುಐ ವಿದ್ಯಾರ್ಥಿ ಘಟಕದ ಸದಸ್ಯರು ಕಡೂರಿನಲ್ಲಿ ಉಪ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.   

ಕಡೂರು: ಬಸ್ ಪಾಸ್ ಅವಧಿಯನ್ನು ವಿಸ್ತರಿಸಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕದ ಸದಸ್ಯರು ತಾಲ್ಲೂಕು ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಅನನುಕೂಲವಾಗುವಂತೆ ಬಸ್ ಪಾಸ್ ವಿತರಿಸಿದ್ದಾರೆ. ಕೇವಲ ಎರಡು ತಿಂಗಳಿಗೆ ಮಾತ್ರ ಪಾಸ್ ವಿತರಣೆಯಾಗಿದೆ. ಆದರೆ, ನವೆಂಬರ್‌ನಲ್ಲಿ ಪರೀಕ್ಷೆಗಳಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇವೆಲ್ಲವನ್ನೂ ವಿದ್ಯಾರ್ಥಿಗಳು ಗಮನಿಸಬೇಕು. ನಿಮ್ಮ ಹಕ್ಕನ್ನು ಕಸಿದುಕೊಳ್ಳವ ಅವಕಾಶಗಳನ್ನು ಪ್ರತಿಭಟಿಸಬೇಕು. ನಿಮ್ಮ ಜೊತೆ ಕಾಂಗ್ರೆಸ್ ಪಕ್ಷ ಸದಾ ಇರುತ್ತದೆ’ ಎಂದರು.

ಯೂತ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜು ರೇವಣ್ಣ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಕಾಲೇಜು ನಡೆಯುವ ತನಕ ಪಾಸ್ ವಿತರಿಸಬೇಕು. ಕೇವಲ ಎರಡು ತಿಂಗಳು ಮಾತ್ರ ಪಾಸ್ ನೀಡಿದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ಕೂಡಲೇ ಈ ತೊಂದರೆ ಬಗೆಹರಿಸಬೇಕು ಎಂದರು. ಈ ಕುರಿತು ಮನವಿಯನ್ನು ಉಪ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.

ADVERTISEMENT

ಕೆ.ಎಸ್.ವಿನಯ್, ಎನ್ಎಸ್‌ಯುಐ ತಾಲ್ಲೂಕು ಅಧ್ಯಕ್ಷ ತರುಣ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಸ್ತಿಕ್ ಮತ್ತು ವಿದ್ಯಾರ್ಥಿ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.