ಕಡೂರು: ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ತಂಡದ ಬಲೆಗೆ ಸಿಕ್ಕಿ ಬಿದ್ದಿದ್ದ ಕಡೂರು ಪುರಸಭೆ ಮುಖ್ಯಾಧಿಕಾರಿ ಎಚ್.ಎನ್. ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.
ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್. ಅರ್ಚನಾ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಮಂಜುನಾಥ್ ಅವರು ಎಸಿಬಿ ಟ್ರ್ಯಾಪ್ ಪ್ರಕರಣದಲ್ಲಿ 48 ಗಂಟೆಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಸಿಬಿ ತಂಡವು ಅ.29ರಂದು ಬಂಧಿಸಿದ ದಿನದಿಂದ ಅನ್ವಯವಾಗುವಂತೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.