ADVERTISEMENT

ಅ.7ರಿಂದ ರಂಭಾಪುರಿ ಸ್ವಾಮೀಜಿಯ ದಸರಾ ಧರ್ಮ ಸಮಾರಂಭ

ಕಡೇನಂದಿಹಳ್ಳಿಯಲ್ಲಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 7:33 IST
Last Updated 3 ಅಕ್ಟೋಬರ್ 2021, 7:33 IST
ರಂಭಾಪುರಿ ಸ್ವಾಮೀಜಿ
ರಂಭಾಪುರಿ ಸ್ವಾಮೀಜಿ   

ಬಾಳೆಹೊನ್ನೂರು: ಇಲ್ಲಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಅವರ 30ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮಾರಂಭ ಅ.7ರಿಂದ 15ರ ವರೆಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿ ಮಳೆಮಲ್ಲೇಶ್ವರ ಕ್ಷೇತ್ರದ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದ ಪರಿಸರದ ‘ಮಾನವ ಧರ್ಮ ಮಹಾಮಂಟಪ’ದಲ್ಲಿ ನಡೆಯಲಿದೆ.

ಅ.7ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನಸಭಾ ಉಪ ಸ್ಪೀಕರ್‌ ಆನಂದ ಮಾಮನಿ, ಕೃಷಿ ಸಚಿವ ಬಿ.ಸಿ.ಪಾಟೀಲ, ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದರಾದ ಬಿ.ವೈ.ರಾಘವೇಂದ್ರ, ಡಾ.ಜಿ.ಎಂ.ಸಿದ್ಧೇಶ್ವರ, ಶಿವಕುಮಾರ ಉದಾಸಿ ಹಾಗೂ ಹಲವು ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.

ವಿವಿಧ ಪ್ರಶಸ್ತಿ: ಈ ವರ್ಷದ ‘ರಂಭಾಪುರಿ ಯುವ ಸಿರಿ’ ಪ್ರಶಸ್ತಿಯನ್ನು ಕೋಣಂದೂರಿನ ಕೆ.ಆರ್.ಪ್ರಕಾಶ ಅವರಗೆ ನೀಡಲಾಗುತ್ತದೆ. ಲಕ್ಷ್ಮೇಶ್ವರದ ಡಾ.ಜಯಶ್ರೀ ಮಲ್ಲಿಕಾರ್ಜುನ ಹೊಸಮನಿ ಅವರಿಗೆ ‘ಸಾಹಿತ್ಯ ಸಿರಿ’,ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ವೀರಶೈವ ಸಿರಿ, ಬೀದರ ಜಿಲ್ಲೆಯ ಹಿರೇಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿಗಳಿಗೆ ‘ಶಿವಾಚಾರ್ಯ ರತ್ನ’ ಹಾಗೂ ಕಡೇನಂದಿಹಳ್ಳಿ- ದುಗ್ಲಿ ಕ್ಷೇತ್ರದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳಿಗೆ ‘ಸಾಧನ ಸಿರಿ’ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ADVERTISEMENT

ಅ.6ರಂದು ಕಡೇನಂದಿಹಳ್ಳಿಗೆ ರಂಭಾಪುರಿ ಸ್ವಾಮೀಜಿ ತೆರಳುವರು. ನಿತ್ಯ ಬೆಳಿಗ್ಗೆ 8 ಗಂಟೆಗೆ ರಂಭಾಪುರಿ ಸ್ವಾಮೀಜಿ ಅವರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಇಷ್ಟಲಿಂಗ ಮಹಾಪೂಜೆ ನೆರವೇರಿಸುವರು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.