ರೈಲು
– ಪ್ರಜಾವಾಣಿ ಚಿತ್ರ
ಚಿಕ್ಕಮಗಳೂರು: ತಿರುಪತಿ – ಚಿಕ್ಕಮಗಳೂರು ನಡುವೆ ಹೊಸದಾಗಿ ನೇರ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಸದ್ಯಕ್ಕೆ ವಾರಕ್ಕೆ ಒಂದು ದಿನ ಮಾತ್ರ ಈ ರೈಲು ಸಂಚರಿಸಲಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಗುರುವಾರ ರಾತ್ರಿ 9 ಗಂಟೆಗೆ ತಿರುಪತಿಯಿಂದ ಹೊರಡುವ ರೈಲು (ಗಾಡಿ ಸಂಖ್ಯೆ- 17423), ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ.
ಶುಕ್ರವಾರ ಸಂಜೆ 5.30ಕ್ಕೆ ಚಿಕ್ಕಮಗಳೂರಿನಿಂದ ಹೊರಡುವ ರೈಲು (ಗಾಡಿ ಸಂಖ್ಯೆ- 17424), ಶನಿವಾರ ಬೆಳಿಗ್ಗೆ 7.40ಕ್ಕೆ ತಿರುಪತಿ ತಲುಪಲಿದೆ.
ಸಖರಾಯಪಟ್ಟಣ, ಬಿಸ್ಲೇಹಳ್ಳಿ, ಕಡೂರು, ಬೀರೂರು, ದೇವನೂರು, ಅರಸೀಕೆರೆ, ತಿಪಟೂರು, ತುಮಕೂರು, ಚಿಕ್ಕಬಾಣಾವರ, ಸರ್ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೆಂಗಳೂರು, ಕೆ.ಆರ್.ಪುರ, ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಜೋಲಾರಪೇಟೆ, ಕಟ್ಪಾಡಿ, ಚಿತ್ತೂರು, ಪಾಕಲ ನಿಲ್ದಾಣಗಳಲ್ಲಿ ರೈಲು ನಿಲುಗಡೆಗೆ ಅವಕಾಶ ನೀಡಲಾಗಿದೆ. ಆರಂಭಿಕ ದಿನವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಸಚಿವರನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದ್ದರು. ಶುಕ್ರವಾರ ವೇಳಾಪಟ್ಟಿ ಬಿಡುಗಡೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.