ಮೂಡಿಗೆರೆ: ತಾಲ್ಲೂಕಿನಾದ್ಯಂತ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಧಾರಾಕಾರ ಮಳೆ ಸುರಿದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು.
ಶನಿವಾರ ತಡರಾತ್ರಿಯ ಬಳಿಕ ಮಳೆ ಚುರುಕಾಗಿದೆ. ಕಾಫಿ ತೋಟಗಳಲ್ಲಿ ಕೃಷಿ ಚಟುವಟಿಕೆಗಳು ಸ್ತಬ್ಧವಾಗಿದ್ದು, ಭತ್ತದ ಗದ್ದೆಗಲ್ಲಿ ನಾಟಿ ಪ್ರಕ್ರಿಯೆ ಚುರುಕುಗೊಂಡಿದೆ. ಚಳಿ ಹೆಚ್ಚಾಗಿದ್ದರಿಂದ ಜನರು ಮನೆಯಿಂದ ಹೊರಗೆ ಬರದೇ ವ್ಯಾಪಾರ ವಹಿವಾಟಿಗೆ ಹಿನ್ನೆಡೆ ಉಂಟಾಗಿದೆ.
ನದಿಪಾತ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ಹೇಮಾವತಿ, ಜಪಾವತಿ, ಚಿಕ್ಕಳ್ಳ, ಸುಣ್ಣದಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ನರಸಿಂಹರಾಜಪುರ ತಾಲ್ಲೂಕಿನಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.