ಚಿಕ್ಕಮಗಳೂರು:ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಬಿರುಸುಗೊಂಡಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಅತ್ತಿಗೆರೆ ಗ್ರಾಮದಲ್ಲಿ ಶಿವಣ್ಣ ಅವರ ಮನೆ ಮೇಲೆ ತೆಂಗಿನ ಮರ ಬಿದ್ದಿದ್ದು, ಚಾವಣಿ ಹಾನಿಯಾಗಿದೆ.
ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಬಿಟ್ಟುಬಿಟ್ಟು ಸುರಿಯುತ್ತಿದೆ. ಕೊಟ್ಟಿಗೆಹಾರದಲ್ಲಿ 8.8 ಸೆಂ.ಮೀ ಮಳೆಯಾಗಿದೆ.
ಹೇಮಾವತಿ, ತಂಗಾ, ಭದ್ರಾ ನದಿಗಳಲ್ಲಿ ಹರಿವು ಹೆಚ್ಚಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.