ಪ್ರಾತಿನಿಧಿಕ ಚಿತ್ರ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದರೂ ಅನುಹುತ ಮುಂದುವರಿದಿದೆ. ಮಲೆನಾಡಿನಲ್ಲಿ ಒರತೆ ಆರಂಭವಾಗಿದ್ದರೆ, ಬಯಲ ಸೀಮೆಯಲ್ಲಿ ಕೆರೆಗಳು ಸಂಪೂರ್ಣ ಭರ್ತಿಯಾಗಿ ನೀರು ಹೊಲಗದ್ದೆಗಳಿಗೆ ತುಂಬಿಕೊಂಡಿದೆ.
ಕಡೂರು ತಾಲ್ಲೂಕಿನ ಐತಿಹಾಸಿಕ ಅಯ್ಯನಕೆರೆ ಭರ್ತಿಯಾಗಿದ್ದು, ಬಯಲು ಸೀಮೆ ರೈತರಲ್ಲಿ ಸಂತಸಕ್ಕೆ ಕಾರಣವಾಗಿದೆ. ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಪ್ರವಾಸಿಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ಭರ್ತಿಯಾಗಿ ಕೋಡಿ ಹರಿಯಲಾರಂಭಿಸಿದ ಮದಗದಕೆರೆ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಪ್ರವಾಹದ ಭೀತಿ ಎದುರಾಗಿದೆ. ತರೀಕೆರೆ ತಾಲ್ಲೂಕಿನ ಜಂಬದಹಳ್ಳಿ ಜಲಾಶಯ ಕೂಡ ಭರ್ತಿಯಾಗಿದ್ದು, ನೀರಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.