ಚಿಕ್ಕಮಗಳೂರು: ನಗರ ಮತ್ತು ಸುತ್ತಮುತ್ತ ಸೋಮವಾರ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನದಿಂದಲೇ ಆರಂಭವಾದ ಗುಡುಗು ಮತ್ತು ಸಿಡಿಲಿನ ಅಬ್ಬರದ ನಡುವೆ ಸಂಜೆ ವೇಳೆಗೆ ಬಂದ ಮಳೆ ತಂಪೆರೆಯಿತು.
ಮಧ್ಯಾಹ್ನ 1 ಗಂಟೆಯಿಂದಲೇ ಮಳೆಯ ವಾತಾವರಣ ನಿರ್ಮಾಣವಾಯಿತು. ಗುಡುಗು ಮತ್ತು ಸಿಡಿಲಿನ ಆರ್ಭಟ ಜೋರಾಗಿತ್ತು. ನಗರದ ರಸ್ತೆಗಳಲ್ಲಿ ನೀರು ಉಕ್ಕಿ ಹರಿಯಿತು. ಮುಳ್ಳಯ್ಯನಗಿರಿ ಭಾಗದಲ್ಲಿ ಮಳೆ ಅಬ್ಬರ ಜೋರಾಗಿತ್ತು. ನಗರದಲ್ಲಿ ಅಲ್ಲಲ್ಲಿ ಕಟ್ಟಿದ್ದ ಬ್ಯಾನರ್‌ಗಳು ಬಿರುಗಾಳಿಯ ರಭಸಕ್ಕೆ ನೆಲಕ್ಕೆ ಬಿದ್ದವು.
ಮನೆ ಮೇಲೆ ಮರ ಬಿದ್ದು ಹಾನಿ
ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಬಸರೀಕಟ್ಟೆಯಲ್ಲಿ ಸೋಮವಾರ ಸುರಿದ ಭಾರಿ ಮಳೆ ಗಾಳಿಯಿಂದಾಗಿ ಮನೆಯ ಮೇಮೆ ಮರ ಬಿದ್ದು ಹಾನಿಯಾಗಿದೆ.
ಸೋಮೇಶ್ವರಖಾನ್ ನಿವಾಸಿ ಮೈಕೆಲ್ ಎಂಬುವವರ ಮನೆ ಮೇಲೆ ದೊಡ್ಡ ಮರ ಬಿದ್ದ ಪರಿಣಾಮ ಹೆಂಚು, ಪಕಾಸಿಗೆ ಹಾನಿಯಾಗಿದೆ. ಮನೆಯ ಒಳಗಿದ್ದ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.