
ಕೊಪ್ಪ: ‘ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಕಚೇರಿ ಉದ್ಘಾಟನೆ ಕಾರ್ಯಕ್ರಮವು ಫೆ.21 ರಂದು ಬೆಳಿಗ್ಗೆ 10 ಗಂಟೆಗೆ ಎನ್.ಆರ್.ಪುರ ತಾಲ್ಲೂಕು ಕಚೇರಿ ಸಮೀಪದಲ್ಲಿರುವ ಒಕ್ಕೂಟದ ಕಚೇರಿ ಎದುರು ಆಯೋಜಿಸಲಾಗಿದೆ’ ಎಂದು ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಗೌರವಾಧ್ಯಕ್ಷ ಎಸ್.ಎನ್.ರಾಮಸ್ವಾಮಿ ಶೆಟ್ಟಿಗದ್ದೆ ತಿಳಿಸಿದರು.
ಗುರುವಾರ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಶೃಂಗೇರಿ ಕ್ಷೇತ್ರ ರೈತ ಒಕ್ಕೂಟಕ್ಕೆ ವಿಶ್ವನಾಥ್ ಗದ್ದೆಮನೆ ಅಧ್ಯಕ್ಷರಾಗಿದ್ದಾರೆ. ಕಾರ್ಯಕ್ರಮದಲ್ಲಿ ಕ್ಷೇತ್ರ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ. ರೈತರಿಗೆ ಪಹಣಿ ಮತ್ತಿತರೆ ದಾಖಲೆ ಉಚಿತವಾಗಿ ನಮ್ಮ ಕಚೇರಿಯಲ್ಲಿ ಒದಗಿಸಲಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲೂ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ’ ಎಂದು ಹೇಳಿದರು.
ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಅವರ ಬೆನ್ನಿಎ ರೈತ ಒಕ್ಕೂಟ ಇರಲಿದೆ. ಸರ್ಕಾರದ ಜೊತೆಗೆ ಸಂಪರ್ಕ ಸಾಧಿಸಿ ರೈತರ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗುವುದು. ಮನವಿ ಸಲ್ಲಿಸಲು ಮೊಬೈಲ್ ಆ್ಯಪ್, ವೆಬ್ ಸೈಟ್ ಅಭಿವೃದ್ಧಿಪಡಿಸಲಾಗುತ್ತಿದೆ. ಯಾವುದೇ ಸಂಘಟನೆ ರೈತರ ಪರವಾಗಿ ಧ್ವನಿ ಎತ್ತಿದರೆ ಅದರ ಜೊತೆಗೆ ಒಕ್ಕೂಟ ಇರಲಿದೆ ಎಂದು ಭರವಸೆ ನೀಡಿದರು.
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಉಪಾಧ್ಯಕ್ಷ ಅನೂಪ್ ನಾರ್ವೆ, ಕಸಬಾ ಘಟಕದ ಅಧ್ಯಕ್ಷ ಪ್ರದೀಪ್, ಕೊಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಕೆಸವೆ, ಕಚೇರಿ ಕಾರ್ಯದರ್ಶಿ ಪೂರ್ಣಚಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.