ADVERTISEMENT

ರಂಭಾಪುರಿ ಶ್ರೀ ಜನ್ಮ ದಿನೋತ್ಸವ ನಾಳೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 8:54 IST
Last Updated 6 ಜನವರಿ 2023, 8:54 IST
ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ
ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ   

ಬಾಳೆಹೊನ್ನೂರು: ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅವರ 67ನೇ ಜನ್ಮ ದಿನೋತ್ಸವವನ್ನು ತೆಲಂಗಾಣ ರಾಜ್ಯದ ಕೊಲನಪಾಕ ಸ್ವಯಂಭು ಸೋಮೇಶ್ವರ ಕ್ಷೇತ್ರದಲ್ಲಿ ಜ.7ರಂದು ಆಚರಿಸಲಾಗುವುದು’ ಎಂದು ಪೀಠದ ವಾರ್ತಾಧಿಕಾರಿ ಸಿ.ಎಚ್.ಬಾಳನಗೌಡ್ರು ಹೇಳಿದರು.

‘ಜ,5ರಿಂದ 7ರವರೆಗೆ ರಂಭಾಪುರಿ ಸ್ವಾಮೀಜಿ ಇಷ್ಟಲಿಂಗ ಪೂಜೆ ನೆರವೇರಿಸುವರು. ಪ್ರತಿದಿನ ಪ್ರಾತ:ಕಾಲದಲ್ಲಿ ಸೋಮೇಶ್ವರ ಮಹಾಲಿಂಗ ಮತ್ತು ವೀರಭದ್ರಸ್ವಾಮಿಗೆ ರುದ್ರಾಭಿಷೇಕ, ಮಹಾಪೂಜೆ ಹಾಗೂ ಶಕ್ತಿಮಾತೆ ಚಂಡಿಕಾಂಬಾ ದೇವಿಗೆ ಕುಂಕುಮಾರ್ಚನೆ ನಡೆಯಲಿದೆ ಎಂದು ಕೊಲನುಪಾಕ ಸೋಮೇಶ್ವರ ಜಗದ್ಗುರು ರೇಣುಕಾಚಾರ್ಯ ಡೆವೆಲಪ್‌ಮೆಂಟ್ ಮತ್ತು ಚಾರಿಟಬಲ್ ಟ್ರಸ್ಟ್‌ನವರು ತಿಳಿಸಿರುವುದಾಗಿ ಅವರು
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT