ADVERTISEMENT

ಚಿಕ್ಕಮಗಳೂರು: ರಂಭಾಪುರಿಶ್ರೀಗೆ ಕೋವಿಡ್‌ ಪಾಸಿಟಿವ್‌

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 14:00 IST
Last Updated 1 ಸೆಪ್ಟೆಂಬರ್ 2020, 14:00 IST
ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ
ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ   

ಚಿಕ್ಕಮಗಳೂರು: ಇಲ್ಲಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮಂಗಳವಾರ ಕೋವಿಡ್‌ ದೃಢಪಟ್ಟಿದೆ. ಬೆಂಗಳೂರಿಗೆ ಚಿಕಿತ್ಸೆಗೆ ತೆರಳಿದ್ದಾರೆ.

ಸ್ವಾಮೀಜಿಗೆ ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಪಟ್ಟಣದ ಆರೋಗ್ಯ ಕೇಂದ್ರದ ವೈದ್ಯರು ಮಂಗಳವಾರ ಮಾದರಿ ಪರೀಕ್ಷೆ ಮಾಡಿದ್ದು, ಕೊರೊನಾ ಸೋಂಕು ಖಾತರಿಯಾಗಿದೆ.

‘ಜ್ವರಕ್ಕೆ ಚಿಕಿತ್ಸೆ ಪಡೆದಿದ್ದು ಕಡಿಮೆಯಾಗಿದೆ. ಲಕ್ಷಣಗಳು ಇಲ್ಲ, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗುತ್ತೇನೆ’ ಎಂದು ರಂಭಾಪುರಿಶ್ರೀ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.