ಚಿಕ್ಕಮಗಳೂರು: 14 ವರ್ಷ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಮೂಡಿಗೆರೆಯ ಸತೀಶ ಎಂಬಾತಗೆ 20ವರ್ಷ ಕಠಿಣ ಸಜೆ, ₹ 1.30 ಲಕ್ಷ ದಂಡವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ ವಿಧಿಸಿದೆ.
ನ್ಯಾಯಾಧೀಶರಾದ ವಿನುತಾ ಪಿ.ಶೆಟ್ಟಿ ಈ ಆದೇಶ ನೀಡಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ₹ 2.95ಲಕ್ಷ ಪರಿಹಾರ ಧನವನ್ನು ಜಿಲ್ಲಾ ಕಾನೂನು ಪ್ರಾಧಿಕಾರದಿಂದ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಏನಿದು ಪ್ರಕರಣ: 2018ರ ಆಗಸ್ಟ್‌ನಲ್ಲಿ ಪ್ರಕರಣ ನಡೆದಿತ್ತು. ಸತೀಶ ಚಿಕ್ಕಮ್ಮನ ಮಗಳನ್ನು (ತಂಗಿ) ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದ.
ಹೋಟೆಲ್‌ವೊಂದರಲ್ಲಿ ಕೆಲಸಕ್ಕಿದ್ದ ಸತೀಶ ಚಿಕ್ಕಮ್ಮನ ಮನೆಯಲ್ಲಿ ವಾಸ ಇದ್ದ. ಬಾಲಕಿ ಮತ್ತು ತಾಯಿ ಕೂಲಿ ಮಾಡಿಕೊಂಡಿದ್ದರು. ಬಾಲಕಿಯನ್ನು ಬೆದರಿಸಿ ಆತ ಅತ್ಯಾಚಾರ ಎಸಗಿದ್ದ. ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿ ತಾಯಿ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸ್ ಇನ್‌ಸ್ಪೆಕ್ಟರ್ ಜಗದೀಶ್ ಪ್ರಕರಣದ ತನಿಖೆ ನಡೆಸಿ ಕೋರ್ಟ್‌ಗೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪೊಕ್ಸೊ ಕೋರ್ಟ್ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಬಿ.ಎಚ್.ಶ್ರೀಹರ್ಷ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.