ADVERTISEMENT

ಕೊಪ್ಪ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ರೇಖಾ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 5 ಮೇ 2025, 14:07 IST
Last Updated 5 ಮೇ 2025, 14:07 IST
ಕೊಪ್ಪ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಚ್.ಆರ್.ರೇಖಾ, ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು
ಕೊಪ್ಪ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಚ್.ಆರ್.ರೇಖಾ, ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು   

ಕೊಪ್ಪ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಚ್.ಆರ್.ರೇಖಾ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.  ರೇಖಾ ಅವರು ಈ ಹಿಂದಿನ ಅವಧಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಉಪಾಧ್ಯಕ್ಷರಾಗಿದ್ದ ಗಾಯಿತ್ರಿ ಶೆಟ್ಟಿ ಅವರನ್ನು ಎರಡನೇ ಅವಧಿಗೆ ಮುಂದುವರಿಸಲಾಯಿತು. ಬಿಜೆಪಿ ಆಂತರಿಕ ಒಪ್ಪಂದದಂತೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಗಾಯತ್ರಿ ವಸಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಇದಿನಬ್ಬ (ಇಸ್ಮಾಯಿಲ್), ಸದಸ್ಯರಾದ ಸುಜಾತ ವಸಂತ್, ಹೇಮಾವತಿ, ಬಿ.ಜೆ.ಪಿ ನಗರ ಘಟಕದ ಪ್ರಧಾನ ‌ಕಾರ್ಯದರ್ಶಿ ಸಿ.ಎಚ್.ಪ್ರಕಾಶ್  ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT