ADVERTISEMENT

ಮುಜರಾಯಿ ಇಲಾಖೆಯಿಂದ ₹16ಲಕ್ಷ ಬಿಡುಗಡೆ: ಎಂ.ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2025, 16:10 IST
Last Updated 4 ಮಾರ್ಚ್ 2025, 16:10 IST
<div class="paragraphs"><p>ಎಂ.ಶ್ರೀನಿವಾಸ್</p></div>

ಎಂ.ಶ್ರೀನಿವಾಸ್

   

ನರಸಿಂಹರಾಜಪುರ: ತಾಲ್ಲೂಕಿನ ವಿವಿಧ ದೇವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ ಒಟ್ಟು ₹16 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದ್ದಾರೆ.

ವಿವಿಧ ದೇವಸ್ಥಾನ ಸಮಿತಿಯವರು ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿಸಿಕೊಡುವಂತೆ ಮನವಿ ಸಲ್ಲಿಸಿದ್ದರು. ಈ ಆಧಾರದಲ್ಲಿ ಮುಜರಾಯಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದು ವಿನಂತಿಸಲಾಗಿತ್ತು.

ADVERTISEMENT

ಮನವಿಗೆ ಸ್ಪಂದಿಸಿರುವ ಸಚಿವರು ಪಟ್ಟಣದ ಕಾಳಿಕಾಂಬ ದೇವಸ್ಥಾನಕ್ಕೆ ₹10 ಲಕ್ಷ, ಪಟ್ಟಣದ ಅಂತರಘಟ್ಟಮ್ಮ ದೇವಸ್ಥಾನಕ್ಕೆ ₹3 ಲಕ್ಷ ಹಾಗೂ ತಾಲ್ಲೂಕಿನ ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಿಕೊಪ್ಪ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ₹ 3 ಲಕ್ಷ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.