ಚಿಕ್ಕಮಗಳೂರು: ನಗರದ ಬಸವನಹಳ್ಳಿ ಕೆರೆ ಸಮೀಪ ಕತ್ರಿಮಾರಮ್ಮ ದೇಗುಲ ಬಳಿ ಲಾರಿ ಡಿಕ್ಕಿಯಾಗಿ ಸೈಕಲ್ ಸವಾರ ದಂಟರಮಕ್ಕಿಯ ಜಗದೀಶ (35) ತೀವ್ರ ಗಾಯಗೊಂಡಿದ್ದಾರೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಂಟರಮಕ್ಕಿ ಕಡೆಯಿಂದ ಬಂದ ಲಾರಿ, ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ ಸವಾರನ ಕಾಲುಗಳ ಮೇಲೆ ಲಾರಿ ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾರಿ ಚಾಲಕ ಪರಾರಿಯಾಗಿದ್ದಾನೆ. ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.