ADVERTISEMENT

ಕಳಸದ ಸಂಸೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಪದಚ್ಯುತಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 12:54 IST
Last Updated 30 ಜುಲೈ 2022, 12:54 IST

ಕಳಸ: ಸಂಸೆ ಗ್ರಾಮ ಪಂಚಾಯಿತಿಯಲ್ಲಿ ಒಂದೂವರೆ ವರ್ಷದಿಂದ ಅಧ್ಯಕ್ಷರಾಗಿದ್ದ ಶ್ರೇಯಾಂಸ ಕುಮಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತ ಗೊಳಿಸಲಾಗಿದೆ.

ಕಾಂಗ್ರೆಸ್ ಬೆಂಬಲಿತರಾಗಿದ್ದ ಶ್ರೇಯಾಂಸ ಇತರ ಪಕ್ಷಗಳ ಬೆಂಬಲ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಕೂಡ ಅವರ ವಿರುದ್ಧ ಅವಿಶ್ವಾಸ ಮಂಡಿಸಿದರು. ಈ ತಿಂಗಳ ಆರಂಭದಲ್ಲಿ ಉಪವಿಭಾಗಾಧಿಕಾರಿ ಭೇಟಿ ಮಾಡಿದ್ದ ಪಂಚಾಯಿತಿ ಸದಸ್ಯರು, ಶ್ರೇಯಾಂಸ ಕುಮಾರ್ ವಿರುದ್ಧ ಪದಚ್ಯುತಿ ಮಂಡನೆ ಮಾಡಿದ್ದರು. 15 ಸದಸ್ಯರ ಬಲ ಇರುವ ಪಂಚಾಯಿತಿಯ 14 ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದರು.

ಶನಿವಾರ ಉಪವಿಭಾಗಾಧಿಕಾರಿ ಡಾ.ನಾಗರಾಜ್, ಅವಿಶ್ವಾಸ ಗೊತ್ತುವಳಿ ಬಗ್ಗೆ ಸದಸ್ಯರ ಅಭಿಪ್ರಾಯ ಕೇಳಿದರು. ಎಲ್ಲ 14 ಸದಸ್ಯರು ಶ್ರೇಯಾಂಸ ಕುಮಾರ್ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿದಾಗ ಗೊತ್ತುವಳಿ ಸ್ವೀಕಾರ ಆಯಿತು. ಶ್ರೇಯಾಂಸ ಕುಮಾರ್ ಸಭೆಗೆ ಹಾಜರಾಗಿರಲಿಲ್ಲ. 15 ಸದಸ್ಯರು ಇರುವ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ 9 ಸದಸ್ಯರು, ಕಾಂಗ್ರೆಸ್ ಬೆಂಬಲಿತ ಐವರು ಮತ್ತು ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಇದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಸಿಕ್ಕಿದೆ.ಜೆಡಿಎಸ್ ಬೆಂಬಲಿತ ಸದಸ್ಯರೊಬ್ಬರು ಅಧ್ಯಕ್ಷರಾಗಿ ಆಯ್ಕೆ ಆಗುವ ನಿರೀಕ್ಷೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.