ADVERTISEMENT

ಭಾರತೀಯ ಭಾಷೆಗಳಿಗೆ ಸಂಸ್ಕೃತವೇ ತಾಯಿಬೇರು: ಶಂಕರ ಎಂ.ಹೆಬ್ಬಾರ್

‘ಅಸ್ಮಾಕಂ ಸಂಸ್ಕೃತಂ’ ಸಂಸ್ಕೃತ ಕಲಿಕಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 14:34 IST
Last Updated 25 ಸೆಪ್ಟೆಂಬರ್ 2024, 14:34 IST
ಬೀರೂರು ಶ್ರಿಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ‘ಅಸ್ಮಾಕಂ ಸಂಸ್ಕೃತಂ’ ಸಂಸ್ಕೃತ ಕಲಿಕಾ ಕಾರ್ಯಕ್ರಮದಲ್ಲಿ ತರಳಬಾಳು ವೇದ, ಸಂಸ್ಕೃತ ಮತ್ತು ಜ್ಯೋತಿಷ್ಯ ಶಾಲೆಯ ಮುಖ್ಯಶಿಕ್ಷಕ ಶಂಕರ ಎಂ.ಹೆಬ್ಬಾರ್ ಉಪನ್ಯಾಸ ನೀಡಿದರು
ಬೀರೂರು ಶ್ರಿಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ‘ಅಸ್ಮಾಕಂ ಸಂಸ್ಕೃತಂ’ ಸಂಸ್ಕೃತ ಕಲಿಕಾ ಕಾರ್ಯಕ್ರಮದಲ್ಲಿ ತರಳಬಾಳು ವೇದ, ಸಂಸ್ಕೃತ ಮತ್ತು ಜ್ಯೋತಿಷ್ಯ ಶಾಲೆಯ ಮುಖ್ಯಶಿಕ್ಷಕ ಶಂಕರ ಎಂ.ಹೆಬ್ಬಾರ್ ಉಪನ್ಯಾಸ ನೀಡಿದರು   

ಬೀರೂರು: ‘ಭಾರತದ ಎಲ್ಲ ಭಾಷೆಗಳಿಗೂ ಸಂಸ್ಕೃತವು ತಾಯಿಬೇರಿನಂತಿದ್ದು, ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸಂಸ್ಕೃತ ಕಲಿಸಲು ಆದ್ಯತೆ ನೀಡಬೇಕಿದೆ’ ಎಂದು ತರಳಬಾಳು ವೇದ, ಸಂಸ್ಕೃತ ಮತ್ತು ಜ್ಯೋತಿಷ್ಯ ಶಾಲೆಯ ಮುಖ್ಯಶಿಕ್ಷಕ ಶಂಕರ ಎಂ.ಹೆಬ್ಬಾರ್ ಅಭಿಪ್ರಾಯಪಟ್ಟರು.

ಇಲ್ಲಿನ ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ, ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ‘ಅಸ್ಮಾಕಂ ಸಂಸ್ಕೃತಂ’ ಸಂಸ್ಕೃತ ಕಲಿಕಾ ಸರಣಿ ಕಾರ್ಯಕ್ರಮದಲ್ಲಿ ‘ಸಂಸ್ಕೃತ ಭಾಷೆಯ ಹಿರಿಮೆ ಮತ್ತು ಮಹತ್ವ’ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಚಿದಾನಂದಮೂರ್ತಿ, ‘ಸಂಸ್ಕೃತ ಭಾಷೆಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ದೇವ ಭಾಷೆಯೆಂದು ಕರೆಯುತ್ತಾರೆ. ಮಕ್ಕಳು ಆಸಕ್ತಿಯಿಂದ ಪ್ರಯತ್ನಿಸಿದರೆ ಕನ್ನಡದಷ್ಟೇ ಸರಳವಾಗಿ ಸಂಸ್ಕೃತ ಕಲಿಯಲು ಸಾಧ್ಯವಿದ್ದು, ನಮ್ಮ ಸಂಸ್ಥೆಯ ಸಂಸ್ಕೃತ- ವೇದ ಪಾಠಶಾಲೆ ಉಪಯುಕ್ತತೆ ಪಡೆಯಬೇಕು’ ಎಂದರು.

ADVERTISEMENT

ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿ.ಸಿ.ಗೀತಾರಾಣಿ, ಅನಂತೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.