ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜು.31ರಂದು(ಬುಧವಾರ) ಮಲೆನಾಡಿನ ಆರು ತಾಲ್ಲೂಕಿನ ಶಾಲಾ– ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಶಾಲೆಗಳು, ಪಿಯು, ಪದವಿ ಮತ್ತು ಎಲ್ಲಾ ರೀತಿಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.