
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಕಡೂರು: ಚಿಕ್ಕಮಗಳೂರಿನಲ್ಲಿ ಗಾರೆ ಕೆಲಸ ಮುಗಿಸಿಕೊಂಡು ತಾಲ್ಲೂಕಿನ ಸಖರಾಯಪಟ್ಟಣ ಬಳಿಯಿಂದ ದೇವನೂರು ಕಡೆಗೆ ತೆರಳುತ್ತಿದ್ದ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಕಾಮೇನಹಳ್ಳಿಯ ಕುಮಾರ್ (35) ಮೃತಪಟ್ಟವರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಸಖರಾಯಪಟ್ಟಣದ ಬಾಣಾವರ ರಸ್ತೆ ಬಳಿಯ ದಾಭಾ ಬಳಿ ಎದುರಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಬಡಿದು ಪಕ್ಕದಲ್ಲಿ ಕಾಲುವೆಗೆ ಬಿದ್ದ ಕುಮಾರ್ ಅವರಿಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತನ ಸಹೋದರ ನೀಡಿದ ದೂರಿನ ಅನ್ವಯ ಸಖರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.