ಮೂಡಿಗೆರೆ: ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರ ಅಜಾದ್ ನಗರದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಅಬ್ಬಾಸ್ ಎಂಬುವವರ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮೂರು ದಿನಗಳ ಹಿಂದೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯು ಮನೆಯಲ್ಲಿ ಒಬ್ಬರೇ ಇರುವಾಗ, ರಾತ್ರಿ 11ರ ಸುಮಾರಿಗೆ ಅಬ್ಬಾಸ್ ಎಂಬಾತ ಬಂದು, ವಾಹನದ ಬಾಡಿಗೆ ಮೊತ್ತವನ್ನು ಕೂಡಲೇ ನೀಡುವಂತೆ ಒತ್ತಾಯಿಸಿದ್ದು, ಹಣ ಇಲ್ಲ ಎಂದಾಗ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ನಡೆಸಿದ್ದಾರೆ. ಸ್ಥಳಕ್ಕೆ ಪುತ್ರಿ ಮೇಲೂ ಹಲ್ಲೆ ಮಾಡಿದ್ದಾರೆ. ಪಟ್ಟಣದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದೇನೆ’ ಎಂದು ಮಹಿಳೆ ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.