ADVERTISEMENT

ಮೂಡಿಗೆರೆ | ಲೈಂಗಿಕ ದೌರ್ಜನ್ಯ: ಪೊಕ್ಸೊ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 13:58 IST
Last Updated 29 ಫೆಬ್ರುವರಿ 2024, 13:58 IST

ಮೂಡಿಗೆರೆ: ಬಾಲಕಿ ಮೇಲೆ ಇಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದ್ದು, ಪೊಕ್ಸೊ ಪ್ರಕರಣ ದಾಖಲಾಗಿದೆ.

ಬಾಲಕಿಯನ್ನು 70 ವರ್ಷದ ವೃದ್ಧ ಫೆ.14 ರಂದು ಹಣ್ಣು ನೀಡುವುದಾಗಿ ಎಂದು ಪುಸಲಾಯಿಸಿ ತೋಟವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಫೆ.25ಕ್ಕೆ ಮತ್ತೋರ್ವ 25 ವರ್ಷದ ಯುವಕ ಚಾಕಲೆಟ್‌ ನೀಡುವುದಾಗಿ ಕರೆದೊಯ್ದು ದೌರ್ಜನ್ಯ ನಡೆಸಿದ್ದಾನೆ. ಬಳಿಕ ಬಾಲಕಿ ಅನಾರೋಗ್ಯಕ್ಕೀಡಾಗಿದ್ದು, ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧನನ್ನು ಬಂಧಿಸಿದ್ದು, ಯುವಕ ತಲೆ ನಾಪತ್ತೆಯಾಗಿದ್ದಾನೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.