ADVERTISEMENT

ಶಂಕರಾಚಾರ್ಯ ಮೂರ್ತಿ ಪ್ರಕರಣ:ನಾಲ್ವರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 4:41 IST
Last Updated 19 ಜೂನ್ 2022, 4:41 IST

ಶೃಂಗೇರಿ: ಶೃಂಗೇರಿಯಲ್ಲಿ ಶಂಕರಾಚಾರ್ಯ ಮೂರ್ತಿ ಅಪವಿತ್ರ ಪ್ರಕರಣದಲ್ಲಿ ತನ್ನ ಮೇಲೆ ಸುಳ್ಳು ಆರೋಪ ಮಾಡಿ ಕೋಮು ಸಾಮರಸ್ಯ ಕೆರಳಿಸಲಾಗಿತ್ತು ಎಂದು ಸುಹೈಲ್ ನೀಡಿದ ಖಾಸಗಿ ದೂರಿನ ಆಧಾರದ ಮೇಲೆ ಆರೋಪಿಗಳಾದ ಮುಖ್ಯಮಂತ್ರಿರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್ ಶೆಟ್ಟಿ, ಸದಸ್ಯ ವೇಣುಗೋಪಾಲ್, ಶ್ರೀರಾಮಸೇನೆ ಮುಖಂಡ ಅರ್ಜುನ್‍ ಅವರ ವಿರುದ್ಧ ಶೃಂಗೇರಿ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. 2020ರ ಆ.13ರಂದು ಶಂಕರಾಚಾರ್ಯ ಮೂರ್ತಿ ಅನ್ಯ ಧರ್ಮದ ಬಟ್ಟೆ ಹಾಕಿ ಅಪವಿತ್ರ ಮಾಡಲಾಗಿದೆ ಎಂದು ಶಂಕರಾಚಾರ್ಯ ಪ್ರತಿಮೆ ಹಾಗೂ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗಿತ್ತು.

‘ಪ್ರತಿಭಟನೆಯಲ್ಲಿ ಈ ನಾಲ್ವರು ಭಾಗಿಯಾಗಿ ನನ್ನ ಮೇಲೆ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದರು’ ಎಂದು ಸುಹೈಲ್‍ರವರು ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಅರ್ಜುನ್, ಡಿ.ಎನ್ ಜೀವರಾಜ್, ಹರೀಶ್ ಶೆಟ್ಟಿ, ವೇಣುಗೋಪಾಲ್ ಅವರ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ, ತನಿಖಾ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿರುವುದು, ಗಲಭೆಗೆ ಪ್ರಚೋದನೆ ನೀಡಿರುವುದು ಎಂಬ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಿಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾ
ಗುವಂತೆ ನೋಟಿಸ್ ಜಾರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT