
ಪ್ರಜಾವಾಣಿ ವಾರ್ತೆಚಿಕ್ಕಮಗಳೂರು:ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ತಾಲ್ಲೂಕಿನ ಆಲ್ದೂರಿನ 36 ವರ್ಷದ ವ್ಯಕ್ತಿಯೊಬ್ಬರನ್ನು ವಿಚಾರಣೆಗೆ ಕರೆದೊಯ್ದಿದೆ.
ಶುಕ್ರವಾರ ಬೆಳಿಗ್ಗೆ ಆಲ್ದೂರಿಗೆ ಬಂದಿದ್ದ ತಂಡದವರು ವ್ಯಕ್ತಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವ್ಯಕ್ತಿ ವಿವಿಧ ಖಾಸಗಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.