ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: ಐವರ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 21:06 IST
Last Updated 17 ಅಕ್ಟೋಬರ್ 2025, 21:06 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಸೇರಿ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶ್ಯಾಮ್, ಅಮಿತ್, ಪುನೀತ್ ಮತ್ತು ದಿಲೀಪ್ ಶೆಟ್ಟಿ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ADVERTISEMENT

ಬುಧವಾರ ನಡೆದ ಪ್ರತಿಭಟನೆಗೆ ಸಂಬಂಧಿಸಿ, ಖಡ್ಗದ ಚಿತ್ರ ಬಳಸಿ ಪ್ರಚೋದನಕಾರಿ ಬರಹ ಬರೆದಿದ್ದರು ಎಂಬುದು ಆರೋಪ. ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.