ADVERTISEMENT

ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆ ಎಸ್‌ಡಿಎ ಕಾಂತರಾಜು ಅಮಾನತು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 15:30 IST
Last Updated 8 ಅಕ್ಟೋಬರ್ 2024, 15:30 IST
<div class="paragraphs"><p>ಕಾಂತರಾಜು</p></div>

ಕಾಂತರಾಜು

   

ಚಿಕ್ಕಮಗಳೂರು: ಅಲೆಮಾರಿ ಮತ್ತು ಸೂಕ್ಷ್ಮ ಅಲೆಮಾರಿ ನಿಗಮದ ಕಿರುಸಾಲ ಯೋಜನೆಯ ಸೌಲಭ್ಯ ನೀಡಲು ₹10 ಸಾವಿರ ಲಂಚ ಪಡೆದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಸಮಾಜ ಕಲ್ಯಾಣ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಕಾಂತರಾಜು ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮೂಡಿಗೆರೆ ತಾಲ್ಲೂಕಿನ ನೆಲ್ಲಿಮಕ್ಕಿ ಗ್ರಾಮದ ಶ್ರೀಧರ್ ಎಂಬುವರು ಕುರಿ ಸಾಕಾಣಿಕೆಗೆ ₹1 ಲಕ್ಷವನ್ನು ಪರಿಶಿಷ್ಟ ಜಾತಿ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮೂಲಕ ನೇರ ಸಾಲ ಪಡೆಯಲು ಅರ್ಜಿ ಸಲ್ಲಿಸಿದ್ದರು. ಸಾಲ ಮಂಜೂರಾಗಿದ್ದು, ಹಣ ಬಿಡುಗಡೆ ಮಾಡಲು ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಕಾಂತರಾಜ್ ಅವರನ್ನು ಬಂಧಿಸಿದ್ದರು.

ADVERTISEMENT

ಕಾಂತರಾಜ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಇಲಾಖೆಯ ಆಯುಕ್ತ ರಾಕೇಶ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.