
ತರೀಕೆರೆ: ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ಸೊಂಪುರ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ದೇವಾಲಯದ ಜಾತ್ರೋತ್ಸವ ಏಳ್ಳ ಅಮಾವಾಸ್ಯೆ ದಿನವಾದ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ನೂರಾರು ಭಕ್ತರು ಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪೂಜೆ ಸಲ್ಲಿಸಿದರು.
ವಿಶೇಷವಾಗಿ ಅಲಂಕರಿಸಿದ ರಥದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ನಂತರ ಉತ್ಸವ ಮೂರ್ತಿಯನ್ನು ಮೀನಾ ಲಗ್ನದಲ್ಲಿ ರಥದಲ್ಲಿ ಆಸೀನಗೊಳಿಸಿದ ಬಳಿಕ ರಥೋತ್ಸವ ನಡೆಯಿತು.
ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್, ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್, ಸದಸ್ಯ ಫಣಿರಾಜ್ ಜೈನ್, ಜಿ.ಪಂ.ಮಾಜಿ ಸದಸ್ಯ ಕೆ.ಪಿ.ಕುಮಾರ, ಕೆಪಿಸಿಸಿ ಸದಸ್ಯ ಎಚ್.ವಿಶ್ವನಾಥ, ಧರ್ಮದರ್ಶಿ ಸಮಿತಿಯ ಮಾಜಿ ಸದಸ್ಯ ಎಲ್.ಟಿ.ಹೇಮಣ್ಣ, ಭದ್ರಾ ಕಾಡಾ ನಿಗಮ ಸದಸ್ಯ ರಾಜಶೇಖರ್, ತಾ.ಪಂ.ಮಾಜಿ ಅಧ್ಯಕ್ಷ ಎಲ್.ಎಸ್.ಶಿವಯೋಗಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಮುಜರಾಯಿ ಅಧಿಕಾರಿಗಳು, ರಕ್ಷಣಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.