ADVERTISEMENT

ಚಿಕ್ಕಮಗಳೂರು: ಎಸ್ಪಿ ಅಣ್ಣಾಮಲೈ ವರ್ಗಾವಣೆ, ನೂತನ ಎಸ್ಪಿಯಾಗಿ ಹರೀಶ್‌ ಪಾಂಡೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 14:47 IST
Last Updated 16 ಅಕ್ಟೋಬರ್ 2018, 14:47 IST
ಕೆ.ಅಣ್ಣಾಮಲೈ
ಕೆ.ಅಣ್ಣಾಮಲೈ   

ಚಿಕ್ಕಮಗಳೂರು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅಪರಾಧ ತನಿಖಾ ದಳದ (ಸಿಐಡಿ) ಎಸ್ಪಿ ಹರೀಶ್‌ ಪಾಂಡೆ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಅಣ್ಣಾಮಲೈ ಅವರು 2016ರ ಆಗಸ್ಟ್‌ 4ರಂದು ಉಡುಪಿಯಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿದ್ದರು. ತಮ್ಮದೇ ಆದ ಕಾರ್ಯ ವೈಖರಿಯಿಂದ ಖಡಕ್‌, ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರಾಗಿದ್ದಾರೆ.

ADVERTISEMENT

ಜಿಲ್ಲೆಯಲ್ಲಿ ಶಾಂತಿ–ಸುವ್ಯವಸ್ಥೆ ನಿರ್ವಹಣೆಗೆ ನಿಗಾ ವಹಿಸಿದ್ದರು. ಬೆಟ್ಟಿಂಗ್‌ ದಂಧೆಗೆ ಕಡಿವಾಣ ಹಾಕಿದ್ದರು. ದತ್ತ ಜಯಂತಿ, ಉರುಸ್‌ ಆಚರಣೆ, ಚುನಾವಣೆ ಭದ್ರತೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿದ್ದರು. ಜನಮನದಲ್ಲಿ ಹೆಸರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.