ADVERTISEMENT

ಚಿಕ್ಕಮಗಳೂರು: ಸಿ.ಟಿ. ರವಿ ಸಿಎಂ ಆಗಬೇಕೆಂದು ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 8:21 IST
Last Updated 27 ಜುಲೈ 2021, 8:21 IST
ಎಂ.ಜಿ ರಸ್ತೆಯ ಗಣಪತಿ ದೇಗುಲದಲ್ಲಿ ಪೂಜೆ
ಎಂ.ಜಿ ರಸ್ತೆಯ ಗಣಪತಿ ದೇಗುಲದಲ್ಲಿ ಪೂಜೆ   

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ಅವರು ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಬಿಜೆಪಿ ಮುಖಂಡರು ಪೂಜೆ ಸಲ್ಲಿಸಿದರು.

ನಗರದ ಎಂ.ಜಿ ರಸ್ತೆಯ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.'ರವಿ ಅವರು ಮುಖ್ಯಮಂತ್ರಿಯಾಗಲಿ ಎಂದು ವಿಶೇಷ ಪೂಜೆ ನೆರವೇರಿಸಲಾಯಿತು' ಎಂದು ಬಿಜೆಪಿ ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ 'ಪ್ರಜಾವಾಣಿ'ಗೆ ತಿಳಿಸಿದರು.

ಭಾನುವಾರ ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಜುಲೈ 27ರರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ADVERTISEMENT

ನಗರದ ಕ್ಯಾಪಿಟಲ್‌ ಹೊಟೇಲ್‌ನಲ್ಲಿ ಈ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸುಸೂತ್ರ ಆಯ್ಕೆ ಪ್ರಕ್ರಿಯೆಗಾಗಿ ದೆಹಲಿಯಿಂದ ವೀಕ್ಷಕರಾಗಿ ಬರುವ ಕೇಂದ್ರ ಸಚಿವರಾದ ಕಿಶನ್‌ ರೆಡ್ಡಿ ಮತ್ತು ಧರ್ಮೇಂದ್ರ ಪ್ರಧಾನ್‌ ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೊದಲಿಗೆ ಹೊಸ ಮುಖ್ಯಮಂತ್ರಿ ಆಯ್ಕೆಗೆ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ಹೆಸರು ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ. ರಾತ್ರಿ 7.30 ಕ್ಕೆ ಈ ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.