ADVERTISEMENT

ಮೂಡಿಗೆರೆ: ಭಾರತ ಸೇನೆಯ ಯಶಸ್ಸಿಗೆ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:30 IST
Last Updated 8 ಮೇ 2025, 15:30 IST
ಮೂಡಿಗೆರೆ ತಾಲ್ಲೂಕಿನ ಅತ್ತಿಗೆರೆ ಸೋಮೇಶ್ವರ ದೇವಾಲಯದಲ್ಲಿ ಗುರುವಾರ ಭಾರತ ಸೇನೆಯ ಯಶಸ್ಸಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು
ಮೂಡಿಗೆರೆ ತಾಲ್ಲೂಕಿನ ಅತ್ತಿಗೆರೆ ಸೋಮೇಶ್ವರ ದೇವಾಲಯದಲ್ಲಿ ಗುರುವಾರ ಭಾರತ ಸೇನೆಯ ಯಶಸ್ಸಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು   

ಮೂಡಿಗೆರೆ: ಭಾರತೀಯ ಸೇನೆಗೆ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸೋಮೇಶ್ವರ ದೇವಾಲಯದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತಿಗೆರೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸೋಮೇಶ್ವರ ದೇವಾಲಯದಲ್ಲಿ ಸೇರಿ, ಭಾರತೀಯ ಸೇನೆಗೆ ಶಕ್ತಿ ಸಿಗಲೆಂದು ಹಾಗೂ ಭಾರತ ಯುದ್ಧದಲ್ಲಿ ಗೆಲುವು ಸಾಧಿಸಲೆಂದು ಪ್ರಾರ್ಥನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ವಿಶೇಷ ಹೋಮ, ಅಭಿಷೇಕ, ಹಾಗೂ ಅರ್ಥಶಾಂತಿ ಯಾಗ ನಡೆಸಿ, ದೇಶದ ರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ADVERTISEMENT

ಗ್ರಾಮದ ಹಿರಿಯರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ರು. ‘ಸೈನಿಕರ ಧೈರ್ಯ ವರ್ಧನೆಗೆ ಇದು ನಮ್ಮ ಕಡೆಯಿಂದ ಸಣ್ಣ ಕೊಡುಗೆ’ ಎಂದು ಗ್ರಾಮದ ಹಿರಿಯರಾದ ನಾಗೇಶ್ ಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.