ADVERTISEMENT

‘ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ’

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 16:05 IST
Last Updated 14 ನವೆಂಬರ್ 2022, 16:05 IST
ಕೊಪ್ಪದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಟಿ.ಡಿ.ರಾಜೇಗೌಡ ಶಂಕುಸ್ಥಾಪನೆ ನೆರವೇರಿಸಿದರು
ಕೊಪ್ಪದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಟಿ.ಡಿ.ರಾಜೇಗೌಡ ಶಂಕುಸ್ಥಾಪನೆ ನೆರವೇರಿಸಿದರು   

ಕೊಪ್ಪ: ‘ಶಿಕ್ಷಣ ಕ್ಷೇತ್ರದಲ್ಲಿ ಮುಂದುವರಿದ ದೇಶಗಳು ಪ್ರಪಂಚದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿವೆ’ ಎಂದು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರೂ ಆದ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಎಂ.ಎಸ್.ದ್ಯಾವೇಗೌಡ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರದಂದು ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡಿ, ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಅತ್ಯಾವಶ್ಯಕ ಎಂದರು.

‘ಪ್ರತಿಭಾ ಕಾರಂಜಿ, ಕ್ರೀಡೆ ಮುಂತಾದ ಸ್ಪರ್ಧೆಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿವೆ. ಜವಾಹರ ಲಾಲ್ ನೆಹರೂ ಅವರು ಮಕ್ಕಳ ಭವಿಷ್ಯಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದರು’ ಎಂದರು.

ADVERTISEMENT

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಕ್ರಂ ನಿಗಳೆ, ಸಮಿತಿ ಉಪಾಧ್ಯಕ್ಷೆ ಪದ್ಮಾವತಿ ರಮೇಶ್, ಪ್ರೌಢಶಾಲೆ ವಿಭಾಗದ ಉಪ ಪ್ರಾಂಶುಪಾಲೆ ಯಶೋದಾ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಉಮೇಶ್ ಶೆಟ್ಟಿ ಮಾತನಾಡಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ರಶೀದ್, ಮೈತ್ರಾ ಗಣೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಸಿ.ರಾಜೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಶರಶ್ಚಂದ್ರ, ಕಾಲೇಜು ಪ್ರಾಂಶುಪಾಲ ಕಮಲ್ ಬಾಬು, ಕಾಲೇಜು ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಶಿವಾನಂದ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.