ಚಿಕ್ಕಮಗಳೂರು: ಚುನಾವಣಾ ಕಾರ್ಯಕ್ಕೆ ತೊಂದರೆ, ಕರ್ತವ್ಯ ಲೋಪ, ನಿರ್ಲಕ್ಷ್ಯದಡಿ ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪುಟ್ಟೇಗೌಡ ಅವರು ಚುನಾವಣಾ ಕೆಲಸಗಳನ್ನು ಸರಿಯಾಗಿ ನಿರ್ವಹಿಸಿಲ್ಲ. ಮಹಿಳಾ ಸಿಬ್ಬಂದಿ ಮುಂದೆ ಅವಾಚ್ಯ, ಅಶ್ಲೀಲ ಪದ ಬಳಸಿ ಮಜುಗುರವಾಗುವಂತೆ ನಡೆದುಕೊಂಡಿರುವುದು ಕಂಡುಬಂದಿದೆ. ತಕ್ಷಣದಿಂದ ಅವರನ್ನು ಆಮಾತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಮೇಶ್ ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.