ADVERTISEMENT

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಸ್ಫೂರ್ತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 5:17 IST
Last Updated 20 ಡಿಸೆಂಬರ್ 2025, 5:17 IST
ವಿನಯ್ ಕಣಿವೆ
ವಿನಯ್ ಕಣಿವೆ   

ನರಸಿಂಹರಾಜಪುರ: ರೋಟರಿ ಸಂಸ್ಥೆ, ಶೃಂಗೇರಿ ಶಾರದಾ ಪೀಠ, ತಾಲ್ಲೂಕು ಒಕ್ಕಲಿಗರ ಸಂಘ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಶಿಕ್ಷಣದ ಇಲಾಖೆಯ ಆಶ್ರಯದಲ್ಲಿ ಪಟ್ಟಣದ ಡಿಸಿಎಂಸಿ ವಿದ್ಯಾಸಂಸ್ಥೆಯ ಆವರಣದಲ್ಲಿ ಡಿ. 20ರಂದು ತಾಲ್ಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ ಸ್ಫೂರ್ತಿ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ವಿನಯ್ ಕಣಿವೆ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಒತ್ತಡವಿಲ್ಲದೆ ಪರೀಕ್ಷೆ ಎದುರಿಸುವುದು ಹೇಗೆ?, ಎಸ್.ಎಸ್.ಎಲ್.ಸಿ ನಂತರ ಏನು? ಎತ್ತ?, ತಂದೆ–ತಾಯಿ, ಗುರು–ಹಿರಿಯರನ್ನು ಗೌರವಿಸುವುದು ಹೇಗೆ?, ಸಂಸ್ಕಾರ–ಸಂಸ್ಕೃತಿಯೊಂದಿಗೆ ಶಿಕ್ಷಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಚಿಂತಕ ಎನ್.ಆರ್. ದಾಮೋದರ ಶರ್ಮಾ ದಿಕ್ಸೂಚಿ ಭಾಷಣ ಮಾಡುವರು ಎಂದರು. 

ರೋಟರಿ ಜಿಲ್ಲೆ 3182 ಉಪರಾಜ್ಯಪಾಲ ರಾಜಗೋಪಾಲ ಜೋಷಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಅತಿಥಿಗಳಾಗಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್.ಎಂ.ಸತೀಶ್, ಉಪಾಧ್ಯಕ್ಷ ಕೆ.ಪಿ.ಅಂಶುಮಂತ್, ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್, ಸಹಕಾರ್ಯದರ್ಶಿ ಪಿ.ಕೆ.ಬಸವರಾಜ್, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್, ರೋಟರಿ ಕಾರ್ಯದರ್ಶಿ ಲೋಕೇಶ್, ಕಾಲೇಜು ಪ್ರಾಂಶುಪಾಲೆ ಪದ್ಮಾರಮೇಶ್, ಮುಖ್ಯಶಿಕ್ಷಕಿ ಲೆವಿನಾ ಜೂಲಿಯಾನ ಡಿಕೋಸ್ಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಲ್.ಎಸ್.ರಕ್ಷಿತ್, ಶಿಕ್ಷಣ ಸಂಯೋಜಕಿ ತೃಪ್ತಿ ಅಮರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT