ADVERTISEMENT

ವಿದ್ಯಾರ್ಥಿಗಳು ಕಲಿತು, ಸಮಾಜಕ್ಕೆ ಕೊಡುಗೆ ನೀಡಬೇಕು: ಶಾಸಕ ಸುರೇಶ್

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 2:58 IST
Last Updated 8 ಆಗಸ್ಟ್ 2022, 2:58 IST
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಜ್ಜಂಪುರದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಾಸಕ ಡಿ.ಎಸ್ ಸುರೇಶ್, ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ಇದ್ದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಜ್ಜಂಪುರದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಾಸಕ ಡಿ.ಎಸ್ ಸುರೇಶ್, ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ಇದ್ದರು.   

ಅಜ್ಜಂಪುರ: ‘ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು. ವಿವಿಧ ಕ್ಷೇತ್ರಗಳಿಗೆ ಕೊಡುಗೆ ನೀಡಬೇಕು’ ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.
ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಕನ್ನಡ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ‘‍ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮತಷ್ಟು ಸಾಧನೆ ಮಾಡಬೇಕು. ಸಮಾಜಕ್ಕೆ ಸೇವೆ ಸಲ್ಲಿಸಬೇಕು’ ಎಂದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಶಾಲೆಯಲ್ಲಿ ಈಗ 1,500 ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸಹಕಾರ ನೀಡುತ್ತಿರುವ ಪೋಷಕರು, ಶಾಲಾ ಸಿಬ್ಬಂದಿಗೆ ಅಬಾರಿಯಾಗಿದ್ದೇವೆ ಎಂದರು.

ADVERTISEMENT

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರತ್ನಾ, ಪ್ರಾಂಶುಪಾಲ ಸಂತೋಷ್‌, ಜಯರಾಮ್ ಇದ್ದರು. ವಿದ್ಯಾರ್ಥಿನಿ ಭಾವನಾ ಅವರಿಗೆ ಅಂಚೆ ಪ್ರತಿಷ್ಠಾನದಿಂದ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.