ಕಡೂರು: ಪ್ರಯತ್ನ ನಿರಂತರವಾಗಿದ್ದರೆ ಯಶಸ್ಸು ದೊರೆಯುತ್ತದೆ ಎಂಬುದಕ್ಕೆ ಭಗೀರಥ ಮಹರ್ಷಿ ಅತ್ಯುತ್ತಮ ಉದಾಹರಣೆ ಎಂದು ಬೀರೂರು ಪುರಸಭೆ ಉಪಾಧ್ಯಕ್ಷೆ ವನಿತಾ ಭಾವಿಮನೆ ಮಧು ಹೇಳಿದರು.
ಕಡೂರು ತಾಲ್ಲೂಕು ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಾವುದೇ ಪ್ರಯತ್ನದ ಹಿಂದೆ ನಿಸ್ವಾರ್ಥವಾದ ಆಶಯ ಇರಬೇಕು. ಆಗ ಆ ಪ್ರಯತ್ನ ಕೈಗೂಡುತ್ತದೆ ಮತ್ತು ಅದಕ್ಕಾಗಿ ಪ್ರಯತ್ನಿಸಿ ಯಶಸ್ಸು ಕಂಡವರ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತದೆ ಎಂಬುದನ್ನು ನಿರೂಪಿಸಿದ ಭಗೀರಥ ಮಹರ್ಷಿ ನಮ್ಮೆಲ್ಲರಿಗೂ ಆದರ್ಶವಾಗಬೇಕಿದೆ ಎಂದರು.
ಉಪ್ಪಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಲೋಕೇಶ್ ಬಾಬು ಮಾತನಾಡಿ, ‘ಭಗೀರಥ ಜಯಂತಿಯನ್ನು ಸರ್ಕಾರವೇ ಆಚರಿಸುತ್ತದೆ. ಆದರೆ, ತಾಲ್ಲೂಕು ಆಡಲಿತ ಯಾವುದೇ ಪೂರ್ವಭಾವಿ ಸಭೆ ನಡೆಸದೆ ನಾಲ್ಕು ಗೋಡೆಗಳ ನಡುವೆ ಜಯಂತಿ ಆಚರಿಸುತ್ತಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಉಪ್ಪಾರ ಸಮಾಜದ ಮುಖಂಡ ಟಿ.ಆರ್.ಲಕ್ಕಪ್ಪ ಭಗೀರಥ ಮಹರ್ಷಿಯ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ವೈ.ಎಂ.ತಿಪ್ಪೇಶ್, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಮಲ್ನಾಡ್ ನಾಗರಾಜ್, ಅಣ್ಣೀಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಡಿ.ಶಂಕರಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ, ಟಿ.ಆರ್.ಲಕ್ಕಪ್ಪ, ಸಾಣೇಹಳ್ಳಿ ನಿಂಗಪ್ಪ, ಯಶಗೊಂಡನಹಳ್ಳಿ ಈಶಪ್ಪ,ಎಂ.ಕೆ.ಮಹೇಶ್ವರಪ್ಪ,ಜಿ.ಎಂ.ತಿಪ್ಪೇಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.