ADVERTISEMENT

ಶೃಂಗೇರಿ ಕ್ಷೇತ್ರ ಅಭಿವೃದ್ಧಿ ಕುಂಠಿತ: ಸುಧಾಕರ ಎಸ್.ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2023, 13:45 IST
Last Updated 7 ಅಕ್ಟೋಬರ್ 2023, 13:45 IST
ಸುಧಾಕರ ಎಸ್.ಶೆಟ್ಟಿ
ಸುಧಾಕರ ಎಸ್.ಶೆಟ್ಟಿ   

ಕೊಪ್ಪ: ‘ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ’ ಎಂದು ರಾಜ್ಯ ಜೆಡಿಎಸ್ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ದೂರಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಮನೆಯೊಂದು 5 ಬಾಗಿಲು ಆಗಿದೆ. ಲಿಂಗಾಯತರ ಬಾಗಿಲು, ಉಪ ಮುಖ್ಯಮಂತ್ರಿ ಬಾಗಿಲು, ಮುಖ್ಯಮಂತ್ರಿಗಳ ಹಿಂದುಳಿದ ವರ್ಗಗಳ ಬಾಗಿಲು, ದಲಿತರ ಬಾಗಿಲು, ಅಲ್ಪ ಸಂಖ್ಯಾತರ ಬಾಗಿಲು ಇದೆ’ ಎಂದರು.

‘ರಾಜ್ಯದಲ್ಲಿ ಸರ್ಕಾರದಿಂದ ಅಭಿವೃದ್ಧಿ ಕೆಲಸಗಳಿಗೆ ಹಣಕಾಸು ಸಂಪೂರ್ಣ ನಿಲ್ಲಿಸಿ ಬಿಟ್ಟಿದೆ, ಮೂಲಸೌಕರ್ಯ ಒದಗಿಸಲು ವಿಫಲವಾಗಿದೆ. ಅಭಿವೃದ್ಧಿ ಕುಂಠಿತವಾಗಿದೆ, ವಿಶೇಷವಾಗಿ ಶೃಂಗೇರಿ ಕ್ಷೇತ್ರ’ ಎಂದು ದೂರಿದರು.

ADVERTISEMENT

‘ಕ್ಷೇತ್ರದ ಶಾಸಕರು ಈ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನನಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ದೂರುತ್ತಿದ್ದರು. ಈಗ ರಾಜ್ಯದಲ್ಲಿ ಅವರದೇ ಪಕ್ಷದ ಬಹುಮತದ ಸರ್ಕಾರ ಇದೆ, ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿವೆ ಇನ್ನೂ ಒಂದೇ ಒಂದು ರಸ್ತೆಗೆ ಹಣ ಬಿಡುಗಡೆ ಮಾಡಿಲ್ಲ’ ಎಂದು ಟೀಕಿಸಿದರು.

‘ಅಗಳಗಂಡಿ, ಶೃಂಗೇರಿ, ಹೆಗ್ಗಾರುಕೊಡಿಗೆ ಭಾಗದಲ್ಲಿ ರಸ್ತೆ ಸೌಲಭ್ಯವಿಲ್ಲದಾಗಿದೆ. ಅರಣ್ಯ ಮತ್ತು ಕಂದಾಯ ಇಲಾಖೆ ಬಡವರನ್ನು ಶೋಷಣೆಗೆ ಒಳಪಡಿಸುತ್ತಿದೆ, ಕಾಂಗ್ರೆಸ್ ಅವಧಿಯಲ್ಲಿ ಬಡವರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ. ಶಾಸಕರು ಕಾರ್ಯಕ್ರಮಗಳಿಗೆ ಸೀಮಿತವಾಗದೇ ಅಭಿವೃದ್ಧಿ ಕೆಲಸದತ್ತ ಮುಖ ಮಾಡಬೇಕು’ ಎಂದು ಹೇಳಿದರು.

ರಾಜ್ಯ ಜೆಡಿಎಸ್ ಮುಖಂಡ ಎಚ್.ಜಿ.ವೆಂಕಟೇಶ್, ಕ್ಷೇತ್ರ ಘಟಕದ ಅಧ್ಯಕ್ಷ ಭಂಡಿಗಡಿ ದಿವಾಕರ ಭಟ್, ನಗರ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಕಾರ್ಡೋಜ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.