ADVERTISEMENT

ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸಹಕಾರಿ: ಹನುಮಂತರಾಯಪ್ಪ 

ಶೃಂಗೇರಿಯಲ್ಲಿ ಸಹಪಠ್ಯ ಚಟುವಟಿಕೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 6:01 IST
Last Updated 18 ನವೆಂಬರ್ 2022, 6:01 IST
ಶೃಂಗೇರಿ ಪಟ್ಟಣದ ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲ ಶಿಕ್ಷಕರಿಗೆ ಆಯೋಜಿಸಿದ ಸಹಪಠ್ಯ ಚಟುವಟಿಕೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ಉದ್ಘಾಟಿಸಿದರು. 
ಶೃಂಗೇರಿ ಪಟ್ಟಣದ ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲ ಶಿಕ್ಷಕರಿಗೆ ಆಯೋಜಿಸಿದ ಸಹಪಠ್ಯ ಚಟುವಟಿಕೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ಉದ್ಘಾಟಿಸಿದರು.    

ಶೃಂಗೇರಿ: `ಶಿಕ್ಷಕರು ಶೈಕ್ಷಣಿಕ ಕರ್ತವ್ಯಗಳ ಜೊತೆ ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕ್ರೀಡಾಕೂಟ ಆಯೋಜಿಸಲಾಗಿದೆ' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ಹೇಳಿದರು.

ಶೃಂಗೇರಿ ಪಟ್ಟಣದ ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

`ಶಿಕ್ಷಕರು ತಮ್ಮ ದೈನಂದಿನ ಚಟುವಟಿಕೆ ನಡುವೆ ಸರ್ಕಾರದ ವಿವಿಧ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ನಿರತರಾಗಿರುತ್ತಾರೆ. ಶಿಕ್ಷಕರೂ ಸಹಪಠ್ಯ ಚಟುವಟಿಕೆಯಲ್ಲಿ ಭಾಗವಹಿಸಿ ಮಾನಸಿಕ ಸದೃಢಗೊಳ್ಳಬೇಕು' ಎಂದರು.

ADVERTISEMENT

ಕ್ಷೇತ್ರ ಸಮನ್ವಯಾಧಿಕಾರಿ ಎನ್.ಜಿ ರಾಘವೇಂದ್ರ ಮಾತನಾಡಿ, `ಗ್ರಾಮೀಣ ಭಾಗದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶ ನೀಡಿದಾಗ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ದೊರಕುತ್ತದೆ' ಎಂದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಎಂ.ಎಲ್ ಪ್ರಕಾಶ್ ಮಾತನಾಡಿ, `ನೌಕರರಿಗೆ ಕರ್ತವ್ಯದ ಜೊತೆಗೆ ಬೌದ್ಧಿಕ ಮೌಲ್ಯಗಳನ್ನು ನೀಡಲು ನಾವೆಲ್ಲ ಶ್ರಮಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ನೀಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್ ಸುಬ್ರಹ್ಮಣ್ಯ, ಬಿ.ಎಲ್ ರವಿಕುಮಾರ್, ಮೈತ್ರಿ, ವಿಜಯ್‍ಕುಮಾರ್, ಸಂತೋಷ್‍ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.