ADVERTISEMENT

ಲಾಟರಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2025, 3:20 IST
Last Updated 13 ಡಿಸೆಂಬರ್ 2025, 3:20 IST
ಲಕ್ಕವಳ್ಳಿ ಗ್ರಾಮ ಪಂಚಾಯಿತಿಯ ನಿವೇಶನ ರಹಿತ ಫಲಾನುಭವಿಗಳ ಆಯ್ಕೆ ಸಮಾರಂಭವನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ಉದ್ಘಾಟಿಸಿ, ಮಾತನಾಡಿದರು
ಲಕ್ಕವಳ್ಳಿ ಗ್ರಾಮ ಪಂಚಾಯಿತಿಯ ನಿವೇಶನ ರಹಿತ ಫಲಾನುಭವಿಗಳ ಆಯ್ಕೆ ಸಮಾರಂಭವನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ಉದ್ಘಾಟಿಸಿ, ಮಾತನಾಡಿದರು   

ತರೀಕೆರೆ: ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ವಿಶೇಷ ಗ್ರಾಮಸಭೆ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಎಚ್. ಶ್ರೀನಿವಾಸ್, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ, ನಿವೇಶನ ರಹಿತರಿಗೆ ಸೌಲಭ್ಯ ಒದಗಿಸುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಈ ಭಾಗದ ನಿವೇಶನ ರಹಿತರಿಗೆ ನಿವೇಶನ ಸೌಲಭ್ಯ ಒದಗಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದರಲ್ಲಿ 65 ನಿವೇಶನಗಳನ್ನು ಹಂಚಿಕೆ ಮಾಡಲು ಲಕ್ಕವಳ್ಳಿ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯಿಂದ ನಿಗದಿ ಮಾಡಿಕೊಂಡಿದೆ’ ಎಂದರು.

ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಾರ ಬೀರನಹಳ್ಳಿಯಲ್ಲಿ ಗುರುತಿಸಲಾದ ಸ್ಥಳಕ್ಕೆ ಸಂಬಂಧಿಸಿದ ಅರ್ಹತಾ ಪಟ್ಟಿಯನ್ನು ಗ್ರಾಮದ ಜನರ ಸಮ್ಮುಖದಲ್ಲಿ ಪಾರದರ್ಶಕವಾಗಿ, ತಾಲ್ಲೂಕು ಆಡಳಿತದ ಸಹಯೋಗದಲ್ಲಿ ತಯಾರಿಸಲಾಗುವುದು ಎಂದು ತಿಳಿಸಿದರು.

ADVERTISEMENT

ನಂತರ, ನಿವೇಶನ ರಹಿತರಿಗೆ ಸಭೆಯಲ್ಲಿ ಮಕ್ಕಳ ಕೈಯಲ್ಲಿ ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ಈ ಸಭೆಯಲ್ಲಿ ನಿವೇಶನ ವಂಚಿತರಾಗಿರುವ ಫಲಾನುಭವಿಗಳಿಗೆ ಲಭ್ಯವಿರುವ ಜಾಗದಲ್ಲಿ ಎಲ್ಲರಿಗೂ ನಿವೇಶನ ಒದಗಿಸಲಾಗುವುದು ಎಂದು ಶಾಸಕರು ಹೇಳಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಉಪಾಧ್ಯಕ್ಷೆ ಭವಾನಿ ಗಣೇಶ್, ಸದಸ್ಯರಾದ ಬಾಲರಾಜ್ ಫಣಿರಾಜ್, ಕಿರಣ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೇವೇಂದ್ರಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ. ಹೇಮಣ್ಣ, ಕಾಡಾ ನಿಗಮದ ಸದಸ್ಯ ರಾಜಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಪಾಂಡುರಂಗ ಜಾದವ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.